ಡ್ರಗ್ಸ್ ಜಾಲದಲ್ಲಿ ಯಾರೇ ಇದ್ದರು ಕಠಿಣ ಕ್ರಮ ಕೈಗೊಳ್ಳಬೇಕು: ಸಿದ್ಧರಾಮಯ್ಯ ಆಗ್ರಹ..!

ಹುಬ್ಬಳ್ಳಿ: ಡ್ರಗ್ಸ್ ಜಾಲದಲ್ಲಿ ಯಾರೇ ಇದ್ದರು ಕಠಿಣ ಕ್ರಮ ಕೈಗೊಳ್ಳಬೇಕು. ಡ್ರಗ್ಸ್ ಜಾಲದಲ್ಲಿ ದೊಡ್ಡವರು ಸಣ್ಣವರು ಅನ್ನೋದು ಬೇಡ. ಯಾರೇ ರಾಜಕೀಯ ನಾಯಕರು ಇದ್ದರು ಕ್ರಮ ಕೈಗೊಳ್ಳಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಜಮೀರ್ ಅಹ್ಮದ್ ವಿರುದ್ದ ಸಾಕ್ಷ್ಯ ಇದ್ದರೆ ಗಲ್ಲಿಗೆ ಏರಿಸಲಿ ಅಂತಾ ಹೇಳಿದ್ದಾರೆ. ಅವರು ಆಸ್ತಿಯಲ್ಲಾ ಮುಟ್ಟುಗೋಲು ಹಾಕಿಕೊಳ್ಳಲಿ ಅಂತಾ ಹೇಳಿದ್ದಾರೆ. ಅದನ್ನು ಬಿಟ್ಟು ರಾಜಕೀಯವಾಗಿ ಮುಗಿಸಲು ಆರೋಪ ಮಾಡಬಾರದು ಎಂದರು. ಸಾಕ್ಷ್ಯ ಸಿಕ್ಕರೆ ಕ್ರಮ ಕೈಗೊಳ್ಳಲಿ, ಸಂಬರಗಿ ಹೇಳಿದರು ಅಂತಾ ತನಿಖೆ ಮಾಡೋಕೆ ಆಗುತ್ತಾ. ಸಾಕ್ಷ್ಯ ಇದ್ರೆ ಯಾರನ್ನಾದರೂ ತನಿಖೆ ಮಾಡಲಿ ಎಂದು ಅವರು ಹೇಳಿದರು. ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರನಿಗೆ ನೋಟಿಸ್ ಜಾರಿ ವಿಚಾರವಾಗಿ ಮಾತನಾಡಿದ ಅವರು, ಅನಗತ್ಯವಾಗಿ ಸಿಬಿಐ ವಿಚಾರಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಇನ್ನೂ ಬರ ಪರಿಹಾರ ಕುರಿತು ಮಾತನಾಡಿ, ಬರ -ನೆರೆ ಪರಿಹಾರ ಇನ್ನೂ ಕೊಟ್ಟಿಲ್ಲ. 25 ಸಂಸದರು ಇದ್ದರು ಪ್ರಯೋಜನವಾಗಿಲ್ಲ ಕಳೆದ ವರ್ಷ ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ. ಆದರೆ ಇದುವರೆಗೂ ಪರಿಹಾರ ನೀಡಿಲ್ಲ. ಮನೆ ಬಿದ್ದವರಿಗೆ ಪರಿಹಾರ ಇನ್ನೂ ಸಿಕ್ಕಿಲ್ಲ ಆನೆ ಹೊಟ್ಟಿಗೆ ಮೂರು ಕಾಸು ಅಲ್ಲ ಆರು ಕಾಸಿನ ಮಜ್ಜಿಗೆ ನೀಡಿದಂತೆ ಪರಿಹಾರ ನೀಡಿದ್ದಾರೆ ಎಂದು ಲೇವಡಿ ಮಾಡಿದರು.ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವೈಪಲ್ಯದ ಬಗ್ಗೆ ಮಾತನಾಡಿ,ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಚರ್ಚೆ ನಡೆಸುತ್ತೇವೆ. ಮೂರು ವಾರಗಳ ಕಾಲ ಅಧಿವೇಶನ ನಡೆಸಲಿ ಅಂತಾ ನಾನು ಸಿಎಂ ಬಿಎಸ್ ವೈ ಗೆ ಪತ್ರ ಬರೆದಿರುವೆ. ನಾಲ್ಕು ಜನರ ವಿರುದ್ದ ಗೋಲಿಬಾರ ಮಾಡಿದ್ದು ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಅನ್ನೋದು ಸತ್ಯ ಎಂದರು. ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣದಲ್ಲಿ ನವೀನ್ ನನ್ನು ತಕ್ಷಣ ಬಂಧನ ಮಾಡಿದ್ರೆ ಬೆಂಕಿ ಹಚ್ಚುತ್ತಿರಲಿಲ್ಲ. ಬೆಂಕಿ ಹಚ್ಚುವುದು ಕಾನೂನುಬಾಹಿರ ನಾನು ಸಹ ಬೆಂಕಿ ಹಾಕಿರುವುದನ್ನು ಖಂಡಿಸುತ್ತೇನೆ ಎಂದರು. ಸಿಎಂ ಬದಲಾವಣೆ ವಿಚಾರವಾಗಿ ನಾನು ಮಾತನಾಡಲ್ಲ.ಅವರು ಯಾರನ್ನಾದರೂ ಮಾಡಿಕೊಳ್ಳಲಿ. ರಾಜ್ಯವಂತು ದಿವಾಳಿಯಾಗಿದೆ. ಅಲ್ಲದೇ ಸಿಎಂ – ಕುಮಾರಸ್ವಾಮಿ ಎನೂ ಮಾತನಾಡಿಕೊಂಡಿದ್ದಾರೆ ಅಂತಾ ನನಗೆ ಗೊತ್ತಿಲ್ಲ. ಆಸ್ಪತ್ರೆಯಲ್ಲಿದ್ದಾಗ ಒಮ್ಮೆ ಯಡಿಯೂರಪ್ಪನವರ ಜೊತೆಗೆ ಮಾತನಾಡಿದ್ದೆ.ಇಬ್ಬರು ಒಂದೆ ಆಸ್ಪತ್ರೆಯಲ್ಲಿ ಇದ್ದೆವು ಡಿಸ್ಚಾರ್ಜ್ ಆಗುವಾಗ ದೂರವಾಣಿ ಕರೆ ಮಾಡಿದರು ಮಾತನಾಡಿದ್ದೆ ಎಂದ ಅವರು,ಜೆಡಿಎಸ್ ನವರಿಗೆ ಸ್ಪಷ್ಟವಾದ ನಿಲುವಿಲ್ಲ. ಅವರು ಯಾವಾಗ ಬೇಕೋ ಅವಾಗ ಅವರನ್ನ ತಬ್ಬಿಕೊಳ್ಳತಾರೆ ಎಂದು ವ್ಯಂಗ್ಯವಾಡಿದರು.

ವರದಿ- ರಾಜುಮುದುಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ

Please follow and like us:

Related posts

Leave a Comment