ನಟಿ ರಾಗಿಣಿ ದ್ವಿವೇದಿಗೆ ಪರಪ್ಪನ ಆಗ್ರಹಾರ ಫೀಕ್ಸ್..!

ಬೆಂಗಳೂರು: ಸತತ 11 ದಿನಗಳಿಂದ ಸಿಸಿಬಿ ಕಸ್ಟಡಿಯಲ್ಲಿದ್ದ ನಟಿ ರಾಗಿಣಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸುವಂತೆ ನ್ಯಾಯಾಲಯ ಆದೇಶ ನೀಡಿದೆ. ನಟಿ ರಾಗಿಣಿ ಬೆನ್ನಲ್ಲೇ ನಟಿ ಸಂಜನಾ ಅವರನ್ನು ಕೂಡ ಬಂಧಿಸಲಾಗಿದ್ದು, ಮಹಿಳಾ ಸಾಂತ್ವಾನ ಕೇಂದ್ರದಲ್ಲಿ ಇರಿಸಿ ವಿಚಾರಣೆ ನಡೆಸಲಾಗುತ್ತಿತ್ತು. ಈ ನಡುವೆ ನಟಿ ರಾಗಿಣಿ ಜಾಮೀನು ಅರ್ಜಿ ಸಲ್ಲಿಸಿದ್ದು, ಇದೀಗ ಆಕ್ಷೇಪಣೆ ಸಲ್ಲಿಸಲು ಬುಧವಾರದವರೆಗೆ ಸಿಸಿಬಿ ಅಧಿಕಾರಿಗಳಿಗೆ ಕಾಲಾವಕಾಶ ನೀಡಿದೆ. ಮಧ್ಯಾಹ್ನ 2 ಗಂಟೆ ನಂತರ ನಟಿ ರಾಗಿಣಿಯನ್ನ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, ಇದೀಗ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ 1ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. ಇನ್ನು ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನಟಿ ರಾಗಿಣಿ, ವಿರೇನ್ ಖನ್ನಾ, ರಾಹುಲ್, ರವಿಶಂಕರ್, ಲೂಮ್ ಪೆಪ್ಪರ್, ಪ್ರಶಾಂತ್ ರಾಂಕ ಹಾಗು ನಯಾಝ್ರನ್ನ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment