ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಆದಿತ್ಯ ಆಳ್ವಾ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು, ಹೆಬ್ಬಾಳದಲ್ಲಿರುವ ಹೌಸ್ ಆಫ್ ಲೈಪ್ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಮಾಜಿ ಸಚಿವ ಜೀವರಾಜ್ ಆಳ್ವಾ ಪುತ್ರ ಆದಿತ್ಯ ಆಳ್ವಾ ಮೇಲೆ ಪ್ರಕರಣ ದಾಖಲಾಗುತ್ತಿದ್ದಂತೆ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ. ಸದ್ಯ ಈತನ ಪತ್ತೆಗಾಗಿ ಸಿಸಿಬಿ ಅಧಿಕಾರಿಗಳು ಶೋಧ ನಡೆಸುತ್ತಿದ್ದು, ಮತ್ತೊಂದು ಕಡೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು