ಡಾ.ವಿಷ್ಣುವರ್ಧನ್ ಸ್ಮಾರಕಕ್ಕೆ ಸಿಕ್ತು ಚಾಲನೆ..!

ಮೈಸೂರು: ಸಾಕಷ್ಟು ವರ್ಷಗಳಿಂದ ವಿಷ್ಣು ಸ್ಮಾರಕ ಬರೀ ನೆಪವಾಗಿಯೇ ಉಳಿದಿತ್ತು. ಇದೇ ತಿಂಗಳ 18 ರಂದು ವಿಷ್ಣುವರ್ಧನ್ ಅವರ 70ನೇ ವರ್ಷದ ಹುಟ್ಟುಹಬ್ಬದ ವಿಶೇಷವಾಗಿ ಇಂದು ಸ್ಮಾರಕಕ್ಕೆ ಚಾಲನೆ ಸಿಕ್ಕಿದೆ. ಕನ್ನಡ ಚಿತ್ರರಂಗದ ಹಿರಿಯ ನಟ ಡಾ.ವಿಷ್ಣುವರ್ಧನ್ ಸ್ಮಾರಕಕ್ಕೆ ಅಡಿಗಲ್ಲು ಹಾಕಲಾಯಿತು. ಮೈಸೂರಿನ ಹಾಲಾಳು ಗ್ರಾಮದಲ್ಲಿ ನಡೆದ ಸಮಾರಂಭಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಆನ್ ಲೈನ್ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಯಡಿಯೂರಪ್ಪ ವಿಷ್ಣುವರ್ಧನ್ ಸಾಧನೆಯನ್ನು ಕೊಂಡಾಡಿದರು. ಕನ್ನಡ ನಾಡು ಕಂಡ ಅಪ್ರತಿಮ ಕಲಾವಿದರಲ್ಲಿ ವಿಷ್ಣುವರ್ಧನ್ ಪ್ರಮುಖರು. ಶ್ರೇಷ್ಠ ನಾಯಕ ನಟರು ಮಾತ್ರವಲ್ಲದೇ ತಮ್ಮ ವ್ಯಕ್ತಿತ್ವದಲ್ಲೂ ಬಹಳಷ್ಟು ಶ್ರೇಷ್ಠ ಗುಣಗಳನ್ನು ಹೊಂದಿದ್ದು ಯುವಜನರಿಗೆ ಸ್ಪೂರ್ತಿಯ ಸೆಲೆಯಾಗಿದ್ದರು. ತಮ್ಮ ಅಭಿಮಾನಿಗಳ ಪಾಲಿಗೆ “ಸಾಹಸ ಸಿಂಹ” ಎಂದೇ ಪ್ರಖ್ಯಾತರಾದ ವಿಷ್ಣು ತಮ್ಮ ಶಿಸ್ತು, ಸಂಯಮಗಳಿಂದ ಎಲ್ಲರ ಪ್ರೀತಿಯನ್ನು ಗೆದ್ದಿದ್ದರು ಎಂದರು. ಸುಮಾರು11 ಕೋಟಿ ರೂ ವೆಚ್ಚದಲ್ಲಿ ಸ್ಮಾರಕ ನಿರ್ಮಾಣವಾಗುತ್ತಿದ್ದು, ಪೊಲೀಸ್ ವಸತಿ ನಿಗಮಕ್ಕೆ ಗುತ್ತಿಗೆ ನೀಡಲಾಗಿದೆ. ಎಂ-9 ಡಿಸೈನ್ ಸ್ಟುಡಿಯೋದಿಂದ ಆರ್ಕಿಟೆಕ್ ಡಿಸೈನ್ ಮಾಡಿಸಲಾಗಿದ್ದು, ವಿಷ್ಣು ಪುತ್ಥಳಿ, ಆಡಿಟೋರಿಯಂ , ಫೋಟೋ ಗ್ಯಾಲರಿ, ಉದ್ಯಾನವನ, ವಾಟರ್ ಪೋಂಡ್ ಒಳಗೊಂಡ ಡಾ.ವಿಷ್ಣು ಸ್ಮಾರಕ ಸಿದ್ಧತೆ ಆಗಲಿದೆ.

ವರದಿ- ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment