ಉದ್ಯೋಗ ಖಾತ್ರಿ ಕೆಲಸ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ..!

ಶಹಾಪುರ : ಮಹಾತ್ಮ ಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೆಲಸ ನೀಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಇಂದು ತಾಲ್ಲೂಕಿನ ಹೋತಪೇಟೆ ಗ್ರಾಮ ಪಂಚಾಯಿತಿ ಮುಂದುಗಡೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.ಆದರೆ ಅಂದು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳಾಗಲಿ ಕಾರ್ಯದರ್ಶಿಗಳಾಗಲಿ ಸಿಬ್ಬಂದಿಗಳಾಗಲಿ ಬರದೆ ಇರುವುದೇ ವಿಪರ್ಯಾಸವಾಗಿತ್ತು. ಸಿಬ್ಬಂದಿಗಳೇ ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಚಕ್ಕರ್ ಹೊಡೆದಿದ್ದಾರೆ ಬೆಳಿಗ್ಗೆಯಿಂದಲೇ ಪ್ರತಿಭಟನಾಕಾರರು ಪಂಚಾಯಿತಿ ಮುಂದುಗಡೆ ಕುಳಿತು ಬೇಸತ್ತು ಹೋದರು ಸಾಯಂಕಾಲ 3 ಗಂಟೆಯ ಸುಮಾರಿಗೆ ಬಂದು ಮನವಿ ಪತ್ರವನ್ನು ಸ್ವೀಕರಿಸಿ ಭರವಸೆ ನೀಡಿದರು.ಪ್ರತಿಭಟನೆ ಹಮ್ಮಿಕೊಳ್ಳುವುದು ಕ್ಕಿಂತ ಮುಂಚೆ ಒಂದು ದಿನ ಸಂಘದ ಸದಸ್ಯರು ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ಗಮನಕ್ಕೆ ತಂದರೂ ಯಾರೊಬ್ಬರೂ ಇತ್ತ ಹಾಯಲಿಲ್ಲ.ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಸಮರ್ಪಕವಾಗಿ ಉದ್ಯೋಗ ನೀಡುತ್ತಿಲ್ಲ ಎಂದು ಆರೋಪಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಕಾರ್ಯದರ್ಶಿಗಳಾದ ಅಂಬಯ್ಯ ಬೇವಿನಕಟ್ಟಿ ನಾಗಪ್ಪ ಇಬ್ರಾಹಿಂಪುರ,ವಿಶ್ವನಾಥ್ ದಿಗ್ಗಿ, ಗ್ರಾಮ ಘಟಕದ ಅಧ್ಯಕ್ಷ ಗಂಗಮ್ಮ ದಿಗ್ಗಿ ಹಾಗೂ ಸಂಘದ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ವರದಿ-ಬಸವರಾಜ ಸಿನ್ನೂರ ಎಕ್ಸ್ ಪ್ರೆಸ್ ಟಿವಿ ಶಹಾಪುರ

Please follow and like us:

Related posts

Leave a Comment