ತುಮಕೂರಿನಲ್ಲಿ ಬೋನಿಗೆ ಬಿದ್ದ ಚಿರತೆ- ನಿಟ್ಟುಸಿರು ಬಿಟ್ಟ ಗ್ರಾಮಸ್ಥರು..!

ತುಮಕೂರು: ತುಮಕೂರು ಜಿಲ್ಲೆಯ ಚಿಕ್ಕ ನಾಯಕನಹಳ್ಳಿ ತಾಲ್ಲೂಕಿನ ಯಳನಾಡುವಿನಲ್ಲಿ ಚಿರತೆ ಯಳನಾಡುವಿನ ಕಾಚನಕಟ್ಟೆ,ಗಂಗಮ್ಮನ ಕೆರೆ ಸುತ್ತಮುತ್ತ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತ ಗ್ರಾಮಸ್ಥರಲ್ಲಿ ಭೀತಿ ಉಂಟು ಮಾಡಿದ್ದ ಚಿರತೆಯೂ ಕಡೆಗೂ ಅರಣ್ಯ ಇಲಾಖೆಯವರು ನಡೆಸಿದ ಕಾರ್ಯಾಚರಣೆಯಲ್ಲಿ ಇಂದು ನಸುಕಿನಲ್ಲಿ ಬೋನಿನಲ್ಲಿ ಸೆರೆಸಿಕ್ಕಿದೆ. ಗ್ರಾಮದ ಸುತ್ತಮುತ್ತ ಕಾಣಿಸಿಕೊಂಡು ರೈತರು ಹೊಲದಲ್ಲಿ ಕೆಲಸವನ್ನು ಮಾಡಲು ಆತಂಕ ಪಡುತ್ತಿದ್ದರು. ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದು ಈ ಹಿನ್ನೆಲೆಯಲ್ಲಿ ಗ್ರಾಮದ ಸಮೀಪ ಅರಣ್ಯ ಇಲಾಖೆಯವರು ಬೋನನ್ನು ಇಟ್ಟಿದ್ದರು. ಆಹಾರವನ್ನು ಅರಸಿ ಬಂದ ಚಿರತೆ ಬೋನಿನಲ್ಲಿ ಸೆರೆ ಸಿಕ್ಕಿದ್ದು ಸುದ್ಧಿ ತಿಳಿದ ಕೂಡಲೇ ಅರಣ್ಯ ಇಲಾಖೆಯವರು ಸ್ಥಳಕ್ಕೆ ಭೇಟಿ ನೀಡಿ ಚಿರತೆಯನ್ನು ಸ್ಥಳಾಂತರಿಸಿದ್ದಾರೆ.

ವರದಿ-ಶ್ರೀಮಂತ್ ಎಕ್ಸ್ ಪ್ರೆಸ್ ಟಿವಿ ಶೀರಾ

Please follow and like us:

Related posts

Leave a Comment