ಬೆಂಗಳೂರು

ನಟಿ ಸಂಜನಾ ಕಸ್ಟಡಿ ಅಂತ್ಯ : ಜೈಲೋ..ಬೇಲೋ..?

Published

on

ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ಲಿಂಕ್ ಪ್ರಕರಣ ಆರೋಪದಲ್ಲಿ ಬಂಧನವಾಗಿರುವ ನಟಿ ಸಂಜನಾ ಗಲ್ರಾನಿಯ ಸಿಸಿಬಿ ಕಸ್ಟಡಿ ಇಂದು ಅಂತ್ಯವಾಗಲಿದೆ. ಈಗಾಗಲೇ 8 ದಿನಗಳ ಸಿಸಿಬಿ ಕಸ್ಟಡಿಯಲ್ಲಿದ್ದ ನಟಿಯನ್ನ ಮಧ್ಯಾಹ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗುತ್ತೆ. ಈಗಾಗಲೇ ಜಾಮೀನು ಅರ್ಜಿ ಸಲ್ಲಿಸಿರುವ ನಟಿ ಸಂಜನಾ ವಿಚಾರಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.ಇನ್ನು ಮತ್ತೊಂದೆಡೆ ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿ ಕೂಡ ಇಂದು ವಿಚಾರಣೆ ನಡೆಯಲಿದೆ. ಈಗಾಗಲೇ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ಭವಿಷ್ಯ ಇಂದು ನಿರ್ಧಾರವಾಗಲಿದೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version