ಕಲಬುರಗಿ, ಬೀದರ್‌ನಲ್ಲಿ ಭಾರಿ ಮಳೆ..!

ಕಲಬುರುಗಿ: ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದ್ದು, ಬೀದರ್ ಜಿಲ್ಲೆಯ ಕಮಲನಗರದಲ್ಲಿ 14.2 ಸೆಂ. ಮೀ. ಮಳೆಯಾಗಿದೆ. ಸೋಮವಾರ ರಾತ್ರಿ, ಮಂಗಳವಾರ ಕಲಬುರಗಿ ಮತ್ತು ಬೀದರ್ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ವಿವಿಧ ಗ್ರಾಮಗಳಲ್ಲಿ ಹಳ್ಳಗಳು ತುಂಬಿ ಹರಿದಿದ್ದು, ಹಳ್ಳಿಗಳಿಗೆ ಸಂಪರ್ಕ ಸ್ಥಗಿತಗೊಂಡಿತ್ತು. ಚಿತ್ತಾಪುರ, ಕಾಳಗಿ, ಸೇಡಂ ತಾಲೂಕುಗಳಲ್ಲಿ ಕಿರು ಸೇತುವೆಗಳು ಮುಳುಗಿ ಹೋಗಿದ್ದು, ವಿವಿಧ ಪ್ರದೇಶದಲ್ಲಿ ಬೆಳೆದುನಿಂತಿದ್ದ ಬೆಳೆಗಳು ಮಳೆ, ಗಾಳಿಗೆ ಸಿಲುಕಿ ಹಾನಿಯಾಗಿವೆ.ಇನ್ನೂ ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಮಾತನಾಡಿ “ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷೆ ಮಾಡುವಂತೆ ಜಿಲ್ಲಾಡಳಿತ ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ತಿಳಿಸಿದ್ದಾರೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment