ಬೆಂಗಳೂರು

ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ.!

Published

on

ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿ ಮುಂದೂಡಿಕೆ ಮಾಡಲಾಗಿದೆ. ಜಾಮೀನು ಕೋರಿ ನಟಿ ರಾಗಿಣಿ ದ್ವಿವೇದಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ತನಿಖೆಯಲ್ಲಿರುವುದರಿಂದ ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ನೀಡುವಂತೆ ನ್ಯಾಯಾಧೀಶರಿಗೆ ಮನವಿ ಮಾಡಿದ್ದರು. ಸಿಸಿಬಿ ಪರ ವಕೀಲರ ವಾದವನ್ನು ಪುರಸ್ಕರಿಸಿದ ನ್ಯಾಯಾಧೀಶರು, ಸೆಪ್ಟೆಂಬರ್ 19 ಕ್ಕೆ ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದ್ದಾರೆ.

ವರದಿ- ಸುಪ್ರಿಯಾ ಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version