ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಅವಮಾನ- ಕಿಡಿಗೇಡಿಗಳನ್ನು ಗಡಿಪಾರು ಮಾಡಬೇಕೆಂದು ಪ್ರತಿಭಟನೆ..!

ಸಿಂಧನೂರು: ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ನಗರದ ಪ್ರವಾಸಿ ಮಂದಿರದಿಂದ ತಹಶಿಲ್ದಾರ ಕಚೇರಿವರೆಗೆ ನೂರಾರು ಶ್ರೀ ಮಹರ್ಷಿ ವಾಲ್ಮೀಕಿ ಸಮಾಜದವರು ಪ್ರತಿಭಟನೆ ಮೆರವಣಿಗೆ ಮಾಡಿದರು. ಇದೇ ಸಂದರ್ಭದಲ್ಲಿ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಯಂಕೋಬ ಮಾತನಾಡಿ ಯಾವುದೇ ಸಮಾಜವಾಗಲೀ ಇತರ ಅಶ್ಲೀಲ ಭಾವಚಿತ್ರಗಳನ್ನು ಫೇಸ್ಬುಕ್ ವಾಟ್ಸಾಪ್ ಮೂಲಕ ಹಾಕುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ನಂತರ ಬರೆದ ಮನವಿ ಪತ್ರವನ್ನು ತಹಶಿಲ್ದಾರ ಮೂಲಕ ಮುಖ್ಯಮಂತ್ರಿ ಗಳಿಗೆ ಸಲ್ಲಿಸಿದರು.ಈ ಸಂಧರ್ಭದಲ್ಲಿ ಜಲಾಲ್ ನಾಯಕ ಬನ್ನಿಗನೂರು,ರವಿ ನಾಯಕ ಬೆಳಗುರ್ಕಿ,ಜಗದೀಶ್ , ವಿರೇಶ್ ನಾಯಕ ಬೂದಿವಾಳ,ಅಯ್ಯಪ್ಪ ಹರೇಟನೂರು, ಚನ್ನಬಸವ ಬಾದರ್ಲಿ, ಸೇರಿದಂತೆ ಅನೇಕರು ಭಾಗವಹಿಸಿದರು.

ವರದಿ- ಸೈಯದ್ ಬಂಧೇನವಾಜ್ ಎಕ್ಸ್ ಪ್ರೆಸ್ ಟಿವಿ ಸಿಂಧನೂರು

Please follow and like us:

Related posts

Leave a Comment