ರೈತ ವಿರೋಧಿ ಕಾನೂನನ್ನು ಕೂಡಲೇ ಹಿಂಪಡೆಯಬೇಕು- ಶೇಕ್ಷಖಾದ್ರಿ ಆಗ್ರಹ..!

ಸಿಂಧನೂರು:.ನಗರದ ತಹಸೀಲ್ ಕಚೇರಿ ಆವರಣದ ಮುಂದೆ ಸಿಪಿಐ ಎಂ ಪಕ್ಷದ ತಾಲ್ಲೂಕು ಸಮಿತಿ ವತಿಯಿಂದ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಮಾಡಲಾಯಿತು.ಈ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿ ಅವರು ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಹಾಗೂ ಕಾರ್ಮಿಕ ವಿರೋಧಿ ಕಾಯ್ದೆ ತಿದ್ದುಪಡಿಯನ್ನು ಹಿಂಪಡೆಯಬೇಕು ಜೊತೆಗೆ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಇರುವ ಜನತೆಗೆ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ 200 ದಿನಗಳ ಉದ್ಯೋಗ ನೀಡುವುದರ ಜೊತೆಗೆ ದಿನಕ್ಕೆ 600 ರೂಪಾಯಿ ವೇತನವನ್ನು ನೀಡಬೇಕು ಹಾಗೂ ನಿರುದ್ಯೋಗ ಯುವಕ ಯುವತಿಯರಿಗೆ ಮಾಸಿಕ 10 ಸಾವಿರ ಭತ್ಯೆಯನ್ನು ನೀಡಬೇಕು ಎಂದು ಒತ್ತಾಯಿಸಿದರು. ನಂತರ ಮನವಿ ಪತ್ರವನ್ನು ತಹಶೀಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಯಂಕಪ್ಪ ಕೆಂಗಲ್, ಅಪ್ಪಣ್ಣ ಕಾಂಬಳೆ, ರಾಮಣ್ಣ, ಮಾಬುಸಾಬ್, ದೇವಪ್ಪ , ಬೀರಪ್ಪ, ಶರಣಬಸವ, ಶಿವರಾಜ್,ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ವರದಿ- ಸೈಯದ್ ಬಂದೇನವಾಜ್ ಎಕ್ಸ್ ಪ್ರೆಸ್ ಟಿವಿ ಸಿಂಧನೂರು

Please follow and like us:

Related posts

Leave a Comment