ವಿವಿಧ ಬೇಡಿಕೆ ಈಡೇರಿಗೆ ಒತ್ತಾಯಿಸಿ ಶಾಸಕರ ಕಚೇರಿ ಮುಂದೆ ಪ್ರತಿಭಟನೆ..!

ಸಿಂಧನೂರು: ನಗರದ ಶಾಸಕರ ಕಚೇರಿ ಮುಂದೆ ಸಿಪಿಐ ಪಕ್ಷ ತಾಲೂಕು ಸಮಿತಿಯಿಂದ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಮಾಡಲಾಯಿತು.ಪ್ರಗತಿಪರ ಮುಖಂಡ ಡಿ.ಹೆಚ್. ಕಂಬಳಿ ಮಾತನಾಡಿ ಕಾರ್ಮಿಕ.ಭೂ ಸುಧಾರಣೆ ಕಾಯ್ದೆ ಹಿಂಪಡೆಯಬೇಕು. ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕರಿಗೆ ಮಾಸಿಕ 18 ಸಾವಿರ ವೇತನವನ್ನು ನೀಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.ನಂತರ ಶಾಸಕರ ಅನುಪಸ್ಥಿತಿಯಲ್ಲಿ ಜೆಡಿಎಸ್ ವಕ್ತಾರ ಬಸವರಾಜ ನಾಡಗೌಡ ಅವರ ಮೂಲಕ ಶಾಸಕರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಗಿರಿಜಮ್ಮ, ಸುಲೋಚನಾ, ದಿಲ್ ಷಾದ್, ಕಾಸಿಂ ಬಿ ,ವಿಜಯಲಕ್ಷ್ಮಿ, ಸೇರಿದಂತೆ ಅನೇಕರು ಭಾಗವಹಿಸಿದ್ದರು.

ವರದಿ-ಸೈಯದ್ ಬಂದೇನವಾಜ್ ಎಕ್ಸ್ ಪ್ರೆಸ್ ಟಿವಿ ಸಿಂಧನೂರು

Please follow and like us:

Related posts

Leave a Comment