ಸರ್ಕಾರ ಅಪೌಷ್ಟಿಕತೆ ಹೋಗಲಾಡಿಸಲು ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ- ಬಸವರಾಜ ನಾಡಗೌಡ..!

ಸಿಂಧನೂರು: ಸರ್ಕಾರ ಅಪೌಷ್ಟಿಕತೆ ಹೋಗಲಾಡಿಸಲು ಹಲವಾರು ಯೋಜನೆಗಳನ್ನು ಜಾರಿಗೆ ಮಾಡಿದೆ ಇದನ್ನು ಸೋರಿಕೆ ಯಾಗದಂತೆ ತಡೆಗಟ್ಟುವ ಮೂಲಕ ಅಪೌಷ್ಟಿಕತೆ ಹೋಗಲಾಡಿಸಲು ಶ್ರಮಿಸೋಣ ಎಂದು ಜೆಡಿಎಸ್ ಪಕ್ಷದ ವಕ್ತಾರ ಬಸವರಾಜ ನಾಡಗೌಡ ಹೇಳಿದರು.ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ ರಾಯಚೂರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ , ತಾಲುಕ ಪಂಚಾಯತಿ, ಶಿಶು ಅಭಿವೃದ್ಧಿ ಯೋಜನೆ ಸಿಂಧನೂರು ಸಂಯುಕ್ತಾ ಆಶ್ರಯದಲ್ಲಿ ಪೋಷಣ್ ಮಾಸಾಚರಣೆ ಹಾಗೂ ಪೋಷಣೆ ಅಭಿಯಾನ ರಥ ಕಾರ್ಯಕ್ರಮ ನಡೆಸಲಾಯಿತು.ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೊವಿಡ್-19 ಸಮಯದಲ್ಲಿ ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ,ಅಧಿಕಾರಿಗಳು ಮತ್ತು ಅಂಗನವಾಡಿ ಕಾರ್ಯಕರ್ತರು ಕೊವಿಡ್ -19 ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಅಲ್ಲದೆ ಗರ್ಭಿಣಿ ಮತ್ತು ಬಾಣಂತಿ ಹಾಗೂ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಮನೆ ಮನೆಗೆ ಹೋಗಿ ತಲುಪಿಸಿದರು. ಸರ್ಕಾರ ಅಪೌಷ್ಟಿಕತೆ ಹೋಗಲಾಡಿಸಲು ಹಲವಾರು ಯೋಜನೆಗಳನ್ನು ಜಾರಿಗೆ ಮಾಡಿದೆ ಇದನ್ನು ಸೋರಿಕೆ ಯಾಗದಂತೆ ತಡೆಗಟ್ಟುವ ಮೂಲಕ ಅಪೌಷ್ಟಿಕತೆ ಹೋಗಲಾಡಿಸಲು ಶ್ರಮಿಸೋಣ ಎಂದು ಹೇಳಿದರು. ಇನ್ನೂ ಅಂಗನವಾಡಿ ಕಾರ್ಯಕರ್ತರಿಗೆ ಮೊಬೈಲ್ ಗಳನ್ನು ವಿತರಣೆ ಮಾಡಲಾಯಿತು.ಈ ಸಂಧರ್ಭದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಯೋಗಿತಾಬಾಯಿ. ಜಿ.ಪ ಸದಸ್ಯರಾದ ಶಿವನಗೌಡ ಗೋರೆಬಾಳ, ಬಸವರಾಜ ಹೀರೆಗೌಡ.ತಾ.ಪ ಅಧ್ಯಕ್ಷೆ ಲಕ್ಷ್ಮೀ ದೇವಿ ಗುರಿಕಾರ, ಉಪಾಧ್ಯಕ್ಷರಾದ ಕರಿ ಹನುಮಮ್ಮ , ತಾಲೂಕು ಆರೋಗ್ಯಾಧಿಕಾರಿ ಡಾ ನಾಗರಾಜ ಪಾಟೀಲ, ಸೇರಿದಂತೆ ಇತರರು ವೇದಿಕೆ ಮೇಲೆ ಉಪಸ್ಥಿತರಿದ್ದರು.

ವರದಿ-ಸೈಯದ್ ಬಂಧೇನವಾಜ್ ಎಕ್ಸ್ ಪ್ರೆಸ್ ಟಿವಿ ಸಿಂಧನೂರು

Please follow and like us:

Related posts

Leave a Comment