ಮಳೆಗಾಲದ ಅಧಿವೇಶನ ಮೊಟಕು ಮಾಡಲು ಮುಂದಾದ ರಾಜ್ಯ ಸರ್ಕಾರ..!

ಬೆಂಗಳೂರು : ಇಂದಿನಿಂದ ರಾಜ್ಯ ವಿಧಾನ ಮಂಡಲದ ಅಧಿವೇಶನ ಆರಂಭವಾಗಲಿದೆ. ಇಂದಿನಿಂದ ಸೆಪ್ಟೆಂಬರ್ 30 ವರೆಗೆ ಅಧಿವೇಶನ ನಡೆಸಲು ತೀರ್ಮಾನ ಮಾಡಲಾಗಿದ್ದು, ಇದೀಗ ಅಧಿವೇಶನವನ್ನ ಮೊಟಕು ಮಾಡಲು ಸರ್ಕಾರ ಮುಂದಾಗಿದೆ. ಈಗಾಗಲೇ ವಿಧಾನ ಮಂಡಲ ಅಧಿವೆಶನಕ್ಕೆ ತಯಾರಿ ಮಾಡಿಕೊಂಡಿದ್ದು,ಕೊರೊನಾ ನೆಗೆಟಿವ್ ಇದ್ದಲ್ಲಿ ಮಾತ್ರ ಸದನಕ್ಕೆ ಹಾಜರಾಗಲಿದ್ದಾರೆ. ಆದರೆ ಕೊರೊನಾ ಸೋಂಕು ಪರೀಕ್ಷೆ ವೇಳೆ 50 ಕ್ಕು ಹೆಚ್ಚು ಜನರಿಗೆ ಕೊರೊನಾ ಸೋಂಕು ಇರುವುದು ಧೃಡವಾಗಿದೆ,ಹೀಗಾಗಿ ಅಧಿವೇಶನವನ್ನ ಆದಷ್ಟು ಬೇಗ ಮುಗಿಸಲು ಸರ್ಕಾರ ನಿರ್ಧಾರ ಮಾಡಿದೆ. ಇನ್ನು ವಿಧಾನ ಮಂಡಲ ಅಧಿವೇಶನದ ಸಮಯದಲ್ಲಿ BAC ಮೀಟಿಂಗ್ ನಡೆಯಲಿದ್ದು, ಈ ವೇಳೆ ಅಧಿವೇಶನ ಮೊಟಕುಗೊಳಿಸುವ ಬಗ್ಗೆ ಪ್ರಸ್ತಾಪ ಮಾಡುವ ಸಾಧ್ಯತೆ ಇದೆ. ಅಧಿವೇಶನದಲ್ಲಿ ಸರ್ಕಾರ ವಿರುದ್ಧ ಚಾಟಿ ಬೀಸಲು ಮುಂದಾಗಿದ್ದ ವಿಪಕ್ಷಗಳು ಸರ್ಕಾರದ ಮನವಿಗೆ ಸ್ಪಂದಿಸುತ್ತಾರಾ ಅಂತ ಕಾದು ನೋಡಬೇಕಿದೆ.

ವರದಿ- ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment