ದಲಿತರ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು- ದಲಿತ ಹಕ್ಕುಗಳ ಸಮಿತಿಯಿಂದ ಪ್ರತಿಭಟನೆ..!

ಮಳವಳ್ಳಿ: ದಲಿತರ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಿ ಸಂಪತ್ತು ಮತ್ತು ವಿಧಾನ ಸಭೆಯಲ್ಲಿ ನಿರ್ಣಯವಾಗುವಂತೆ ದಲಿತ ಹಕ್ಕುಗಳ ಸಮಿತಿ ಕರ್ನಾಟಕ ವತಿಯಿಂದ ಮಳವಳ್ಳಿ ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ದಲಿತ ಹಕ್ಕುಗಳ ಸಮಿತಿ ಕರ್ನಾಟಕ ತಾಲ್ಲೂಕು ಸಂಚಾಲಕ ಎಂ.ಡಿ ಶಂಕರ್ ನೇತೃತ್ವದಲ್ಲಿ ದಲಿತರ ಬಗ್ಗೆ ವಿವಿಧ ಬೇಡಿಕೆಗಳ ಘೋಷಣೆ ಕೂಗಿದರು. ಇನ್ನೂ ದಲಿತ ಹಕ್ಕುಗಳ ಸಮಿತಿ ಕರ್ನಾಟಕ ತಾಲ್ಲೂಕು ಸಂಚಾಲಕ ಎಂ.ಡಿ ಶಂಕರ್ ಮಾತನಾಡಿ,ದಲಿತ ವಿರೋಧಿ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಾಪಸ್ಸಾಗಲಿ, ದೌರ್ಜನ್ಯ ತಡೆ ಕಾಯ್ದೆ ಬಲಗೊಳಿಸಬೇಕು, ದೌರ್ಜನ್ಯ ಕ್ಕೊಳಗಾದದವರಿಗೆ ತಕ್ಷಣ ಪರಿಹಾರ ಒದಗಿಸಬೇಕು, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ತ್ವರಿತ ನ್ಯಾಯಾಲಯ ಸ್ಥಾಪನೆಯಾಗಬೇಕು, ಒಳಮೀಸಲಾತಿ ಬಗ್ಗೆ ಸರ್ಕಾರದ ನಿಲುವು ಏನೆಂಬುದನ್ನು ಸ್ವಷ್ಟಪಡಿಸಬೇಕು ಎಂದು ಒತ್ತಾಯಿಸಿದರು. ಇದಲ್ಲದೆ ಅಂಬೇಡ್ಕರ್ ,ಅಶ್ರಯ, ಇಂದಿರಾ ಅವಾಸ್ ಇತ್ಯಾದಿ ಯೋಜನೆಯಲ್ಲಿ ಗ್ರಾಮಾಂತರದಲ್ಲಿ ದಲಿತರಿಗೆ ಹಿತ್ತಲಸಹಿತ ಮನೆಗಾಗಿ 4 ಗುಂಟೆ ಭೂಮಿ ನೀಡಬೇಕು ಸೇರಿದಂತೆ 13 ಬೇಡಿಕೆಗಳ್ಳ ಮನವಿ ಪತ್ರವನ್ನು ಉಪತಹಸೀಲ್ದಾರ್ ವಸಂತಕುಮಾರ್ ಮನವಿ ಸಲ್ಲಿಸಿದರು. ಇನ್ನೂಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕ ಆರ್ ಕೃಷ್ಣ, ಸಿದ್ದಯ್ಯ, ಮಾಧವಿ, ಜಯಲಕ್ಷ್ಮಿಮ್ಮ, ಶಿವಶಂಕರ್, ಸೇರಿದಂತೆ ಮತ್ತಿತ್ತರರು ಭಾಗಿಯಾಗಿದ್ದರು.

ವರದಿ-ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Please follow and like us:

Related posts

Leave a Comment