ತಿಪಟೂರು

ಸಾಮಾಜಿಕ ನ್ಯಾಯ ಮತ್ತು ಒಳ ಮೀಸಲಾತಿಗಾಗಿ ಪ್ರತಿಭಟನೆ..!

Published

on

ತಿಪಟೂರು: ತಿಪಟೂರು ನಗರದ ಉಪ ವಿಭಾಗಾಧಿಕಾರಿಗಳ ಕಚೇರಿ ಮುಂದೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ರಾಮಾಂಜನೇಯ ನೇತೃತ್ವದಲ್ಲಿ ಹಲವು ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆಯನ್ನು ನಡೆಸಿದರು.ಈ ವೇಳೆ ಮಾತನಾಡಿದ ಅವರು ರಾಜ್ಯ ಮತ್ತು ಕೇಂದ್ರ ಸರಕಾರಗಳು ಸುಪ್ರೀಂಕೋರ್ಟ್ ಆದೇಶದಂತೆ ಒಳ ಮೀಸಲಾತಿಯನ್ನು ಕೂಡಲೇ ಜಾರಿಗೆ ತರಬೇಕು ಮತ್ತು ಪೌರಕಾರ್ಮಿಕರನ್ನು ಕೂಡಲೇ ಕಾಯಂಗೊಳಿಸಿ ಅವರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.ಅದೇ ರೀತಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಮಹಾನಾಯಕ ಡಾ ಬಿಆರ್ ಅಂಬೇಡ್ಕರ್ ಧಾರಾವಾಹಿಯ ಪ್ರಸಾರವನ್ನು ತಡೆಯುವ ಶಕ್ತಿಯನ್ನು ಕಾನೂನಡಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶೆಟ್ಟಿಹಳ್ಳಿ ಕಲ್ಲೇಶ್ ಮಾತನಾಡಿ ದಲಿತರ ಸಾಗುವಳಿ ಜಮೀನನ್ನು ಪೋಡಿ ಪ್ರಕರಣವನ್ನು ಹಾಗೂ ಪಿಟಿಸಿಎಲ್ ಕಾಯ್ದೆಯನ್ನು ಶೀಘ್ರವೇ ಇತ್ಯರ್ಥಪಡಿಸಬೇಕು ಮತ್ತು ಸರ್ವೋದಯ ವಿದ್ಯಾ ಸಂಸ್ಥೆಯ ಕಾರ್ಯದರ್ಶಿಗಳಾದ ದಾಸಪ್ಪನವರು ಮರಣ ಹೊಂದಿದ್ದು ಈ ಸಂಸ್ಥೆಯ ಆಸ್ತಿಯನ್ನು ಕಬಳಿಸಲು ಹಲವು ಹಿತಾಸಕ್ತಿಗಳು ಪ್ರಯತ್ನಿಸಿದ್ದು ಅದಕ್ಕೆ ಅವಕಾಶವನ್ನು ಮಾಡಿಕೊಡದೆ ಸಂಸ್ಥೆಯ ಮೂಲ ವ್ಯಕ್ತಿಗಳಾದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮುಖಂಡರುಗಳಿಗೆ ಸಂಸ್ಥೆಯನ್ನು ಮುಂದುವರಿಸಿಕೊಂಡು ಹೋಗಲು ಅವಕಾಶವನ್ನು ಕಲ್ಪಿಸಿಕೊಡಬೇಕೆಂದು ಉಪವಿಭಾಗಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು.ಈ ಪ್ರತಿಭಟನೆಯಲ್ಲಿ ಸಂಘದಜಿಲ್ಲಾಧ್ಯಕ್ಷರಾದ ರಾಮಾಂಜನೇಯ ಶೆಟ್ಟಿಹಳ್ಳಿ ಕಲ್ಲೇಶ್ ಬಳ್ಳೇಕಟ್ಟೆ ನರಸಿಂಹಯ್ಯ ಧರಣೇಶ್ ಮತ್ತು ಭರತ್ ಮತ್ತು ಎಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು.

ವರದಿ0 ಸಿದ್ದೇಶ್ವರ ಸಿಎನ್ ಎಕ್ಸ್ ಪ್ರೆಸ್ ಟಿವಿ ತಿಪಟೂರು.

Click to comment

Trending

Exit mobile version