ದಲಿತರ ಜ್ವಲಂತ ಸಮಸ್ಯೆಗಳನ್ನು ಲೋಕಸಭಾ ಹಾಗೂ ವಿಧಾನಸಭೆ ಯಲ್ಲಿ ಚರ್ಚಿಸಿ ಬಗೆಹರಿಸಲು ಒತ್ತಾಯಿಸಿ ಪ್ರತಿಭಟನೆ…!

ಸಿಂಧನೂರು: ನಗರದ ಪ್ರವಾಸಿ ಮಂದಿರದಿಂದ ಕರ್ನಾಟಕ ದಲಿತ ಹಕ್ಕುಗಳ ತಾಲೂಕು ಸಮಿತಿ ವತಿಯಿಂದ ತಹಶಿಲ್ದಾರ ಕಚೇರಿ ವರೆಗೆ ಪ್ರತಿಭಟನೆ ಮೆರವಣಿಗೆ ಮಾಡುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕುಗ್ಗಿದರು. ದಲಿತರ ಮೇಲೆ ದೌರ್ಜನ್ಯ ಕಾಯ್ದೆ ಬಲಪಡಿಸಿ.ದೌರ್ಜನ್ಯಕ್ಕೊಳಗಾ ತಕ್ಷಣ ಸೂಕ್ತ ರಕ್ಷಣೆ ನೀಡಿ ನೊಂದ ಕುಟುಂಬಗಳಿಗೆ ಪರಿಹಾರ ನೀಡಬೇಕು. ದಲಿತ ವಿರೋಧಿ ಭೂ ಸುಧಾರಣೆ ಕಾಯ್ದೆ ಹಿಂಪಡೆಯಬೇಕು. ಪ್ರತಿ ಜಿಲ್ಲಾ ಕೇಂದ್ರ ಗಳಲ್ಲಿ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಿಬೇಕು. ನ್ಯಾಯ ಮೂರ್ತಿ ನಾಗಮೋಹನ್ ದಾಸ್ ಹಾಗೂ ಸದಾಶಿವ ಆಯೋಗದ ವರದಿಯನ್ನು ಬಹಿರಂಗ ಪಡಿಸಬೇಕು.ಬಡ್ತಿ ಮೀಸಲಾತಿಯಲ್ಲಿ ಆಗಿರುವ ಅನ್ಯಾಯ ಸರಿಪಡಿಸಿ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು ಸೇರಿದಂತೆ ಹತ್ತು ಹಲವು ಬೇಡಿಕೆ ಈಡೇರಿಸಲು ಒತ್ತಾಯಿಸಿ ತಹಶಿಲ್ದಾರರ ಮೂಲಕ ಪ್ರಧಾನಮಂತ್ರಿಗಳಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಈ ಸಂಧರ್ಭದಲ್ಲಿ ದಲಿತ ಹಕ್ಕುಗಳ ಸಮಿತಿ ತಾಲೂಕು ಕಾರ್ಯದರ್ಶಿ ನರಸಿಂಹಪ್ಪ, ಅಧ್ಯಕ್ಷ ಹನುಮಂತ ಮ್ಯಾಗಳಮನಿ, ಉಪಾಧ್ಯಕ್ಷ ಯಂಕಪ್ಪ ಕೆಂಗಲ್, ಸೇರಿದಂತೆ ಅನೇಕರು ಭಾಗವಹಿಸಿದರು.

ವರದಿ-ಸೈಯದ್ ಬಂಧೇನವಾಜ್ ಎಕ್ಸ್ ಪ್ರೆಸ್ ಟಿವಿ ಸಿಂಧನೂರು

Please follow and like us:

Related posts

Leave a Comment