ಸಿಂಧನೂರು

ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಪ್ರತಿಭಟನೆ…!

Published

on

ಸಿಂಧನೂರು: ನಗರದ ಪ್ರವಾಸಿ ಮಂದಿರದಿಂದ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ತಾಲೂಕು ಸಮಿತಿಯಿಂದ ತಹಶಿಲ್ದಾರ ಕಚೇರಿ ವರೆಗೆ ಪ್ರತಿಭಟನ ಮೆರವಣಿಗೆ ಮಾಡಿದರು.ಎಲ್ಲಾ ದೇವದಾಸಿ ಮಹಿಳೆಯರಿಗೆ ಹಾಗೂ ಕುಟುಂಬದ ಸದಸ್ಯರಿಗೆ 5 ಎಕರೆ ಭೂಮಿ ಜೊತೆಗೆ ನಿವೇಶನ ಸಹಿತ 10 ಲಕ್ಷ ಮೌಲ್ಯದ ಮನೆಯನ್ನು ನಿರ್ಮಿಸಿ ಕೊಡಬೇಕು.ಕೋವಿಡ್ ಎದುರಿಸಲು ಆದಾಯ ತೆರಿಗೆ ವ್ಯಾಪ್ತಿಗೆ ಬಾರದ ಎಲ್ಲಾ ಕುಟುಂಬಗಳಿಗೆ 7500 ಮಾಸಿಕ ಹಣವನ್ನು 6 ತಿಂಗಳ ವರೆಗೆ ಒದಗಿಸಬೇಕು. ದೇವದಾಸಿ ಮಹಿಳೆಯರಿಗೆ ನೀಡಲಾದ ಸಹಾಯಧನ ಹಾಗೂ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಸಾಲವನ್ನು ಮನ್ನಾ ಮಾಡಬೇಕು.ಪರಿಶಿಷ್ಟ ಜಾತಿ ಜನಸಂಖ್ಯೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗ ಮೀಸಲಾತಿ ಹಾಗೂ ಒಳಮೀಸಲಾತಿ ಕಲ್ಪಿಸಿ.ಖಾಸಗಿ ಕ್ಷೇತ್ರಕ್ಕೂ ವಿಸ್ತರಿಸಬೇಕು. ಭೂ ಸುಧಾರಣೆ ಕಾಯ್ದೆ, ಎಪಿಎಮ್.ಸಿ.ಕಾಯ್ದೆ, ಕಾರ್ಮಿಕ ಕಾಯ್ದೆ ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ ಸೇರಿದಂತೆ ಇತರೆ ಕಾಯ್ದೆ ಗಳನ್ನು ಹಿಂಪಡೆಯಬೇಕು ಎನ್ನುವುದು ಸೇರಿದಂತೆ ಅನೇಕ ಬೇಡಿಕೆ ಈಡೇರಿಸಲು ಒತ್ತಾಯಿಸಿ ತಹಶಿಲ್ದಾರರ ಮೂಲಕ ಪ್ರಧಾನಮಂತ್ರಿ ಗಳಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಈ ಸಂಧರ್ಭದಲ್ಲಿ ನರಸಿಂಹಪ್ಪ, ಕರಿಯಮ್ಮ, ಯಂಕಪ್ಪ ಕೆಂಗಲ್,ಹನುಮಂತ ಮ್ಯಾಗಳಮನಿ, ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ವರದಿ-ಸೈಯದ್ ಬಂಧೇನವಾಜ್ ಎಕ್ಸ್ ಪ್ರೆಸ್ ಟಿವಿ ಸಿಂಧನೂರು

Click to comment

Trending

Exit mobile version