ಮಾದಕ ವಸ್ತುಗಳ ವಿರುದ್ಧ ಅಭಿಯಾನಕ್ಕೆ ಕೈ ಜೋಡಿಸುವಂತೆ ಜನತೆಗೆ ಡಿವೈಎಸ್ಪಿ ವಿಶ್ವನಾಥರಾವ್ ಕುಲಕರ್ಣಿ ಮನವಿ..!

ಸಿಂಧನೂರು: ನಗರದ ಸುಕಾಲಪೇಟೆ ರಸ್ತೆಯಲ್ಲಿರುವ ಡಿವೈಎಸ್ಪಿ ಕಚೇರಿಯಲ್ಲಿ ಪತ್ರಿಕೆಯೊಂದಿಗೆ ಡಿವೈಎಸ್ಪಿ ವಿಶ್ವನಾಥರಾವ್ ಕುಲಕರ್ಣಿ ಮಾತನಾಡಿ ರಾಜ್ಯದಾದ್ಯಂತ ಮಾದಕ ವಸ್ತುಗಳ ವಿರುದ್ಧ ಅಭಿಯಾನ ನಡೆದಿದ್ದು.ಅದರ ಅನ್ವಯ ಸಿಂಧನೂರು ಉಪ ವಿಭಾಗದಲ್ಲಿ ಬರುವ 3 ಪೋಲಿಸ್ ಠಾಣೆ ಯ ವ್ಯಾಪ್ತಿಯಲ್ಲಿ ಒಟ್ಟು 4 ಗಾಂಜಾ ಪ್ರಕರಣ ದಾಖಲೆ ಮಾಡಿಕೊಂಡು ಸುಮಾರು 10 ಕೆ.ಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.ಸಿಂಧನೂರು ಗ್ರಾಮೀಣ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ 2 ಪ್ರಕರಣ ದಾಖಲೆ ಯಾದರೆ ತುರುವಿಹಾಳ ಪೋಲಿಸ್ ಠಾಣೆ ಹಾಗೂ ಕವಿತಾಳ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಒಂದು ಒಂದು ಪ್ರಕರಣ ದಾಖಲೆಯಾಗಿದೆ.ನಗರ ಹಾಗೂ ಗ್ರಾಮೀಣ ಭಾಗದ ಎಲ್ಲಾ ಸಾರ್ವಜನಿಕರು ತಮ್ಮ ಸುತ್ತಲೂ ನಡೆಯು ಗಾಂಜಾ ಮಾರಾಟ ಹಾಗೂ ಗಾಂಜಾ ಬೆಳೆಯುವ ವ್ಯಕ್ತಿಗಳ ಕುರಿತು ಹಾಗೂ ಮಾದಕ ವಸ್ತುಗಳ ಬಗ್ಗೆ ಮಾಹಿತಿ ನಮಗೆ ನೀಡುವ ಮೂಲಕ ರಾಜ್ಯದಾದ್ಯಂತ ಮಾದಕ ವಸ್ತುಗಳ ವಿರುದ್ಧ ಅಭಿಯಾನಕ್ಕೆ ಕೈ ಜೋಡಿಸಿ ಸಹಕರಿಸಲು ಸೂಚಿಸಿದರು.

ವರದಿ- ಸೈಯದ್ ಬಂದೇನವಾಜ್ ಎಕ್ಸ್ ಪ್ರೆಸ್ ಟಿವಿ

Please follow and like us:

Related posts

Leave a Comment