ಪೌರ ಕಾರ್ಮಿಕರ ದಿನಾಚರಣೆ ಆಚರಣೆ ಪ್ರಯುಕ್ತ ಸಾಧಕರಿಗೆ ಸನ್ಮಾನ ಸಮಾರಂಭ.!

ಲಿಂಗಸೂಗೂರು:ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘ ಮುದಗಲ್ ಶಾಖೆ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಪ್ರಶಸ್ತಿ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭವನ್ನು ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಸ್ನೇಹ ಫಂಕ್ಷನ್ ಹಾಲ್ ನಲ್ಲಿ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಲಿಂಗಸುಗೂರು ಶಾಸಕ ಡಿ ಎಸ್ ಹೂಲಗೇರಿ ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೆ ವೇಳೆ ತಹಶೀಲ್ದಾರ ಚಾಮರಾಜ್ ಪಾಟೀಲ್. ಪುರಸಭೆ ಮುಖ್ಯಾಧಿಕಾರಿ ನರಸಿಂಹಮೂರ್ತಿ. ಸಂಘದ ಅಧ್ಯಕ್ಷ ಹನುಮಂತ ನಾಯಕ ಸೇರಿದಂತೆ ಮುದಗಲ್ ಪುರಸಭೆ ಪೌರ ಕಾರ್ಮಿಕರು ಉಪಸ್ಥಿತರಿದ್ದರು.

ವರದಿ:ವೀರೇಶ್ ಅರಮನಿ ಎಕ್ಸ್ಪ್ರೆಸ್ ಟಿವಿ ಲಿಂಗಸೂಗೂರು.

Please follow and like us:

Related posts

Leave a Comment