ಬೆಂಗಳೂರು

ಹಿರಿಯ ನಟ ರಾಕ್ಲೈನ್ ಸುಧಾಕರ್ ಇನ್ನಿಲ್ಲ..!

Published

on

ಬೆಂಗಳೂರು : ಸ್ಯಾಂಡಲ್ವುಡ್ ಹಿರಿಯ ಹಾಸ್ಯ ನಟ ರಾಕ್ಲೈನ್ ಸುಧಾಕರ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಸಿಂಪಲ್ ಸುನಿ ನಿರ್ದೇಶಿಸುತ್ತಿರುವ ಸಿನಿಮಾ ಶೂಟಿಂಗ್ ವೇಳೆ ರಾಕ್ಲೈನ್ ಸುಧಾಕರ್ಗೆ ತೀವ್ರ ಹೃದಯಾಘಾತವಾಗಿದೆ. ತಕ್ಷಣ ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಇತ್ತೀಚಿಗೆ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಬಳಿಕ ಸಿನಿಮಾದಲ್ಲಿ ಬ್ಯುಸಿಯಾಗಿದ್ದ ಸುಧಾಕರ್ಗೆ ತೀವ್ರ ಎದೆ ನೋವು ಕಾಣಿಸಿಕೊಂಡಿತ್ತು. ಅಜಿತ್, ಉಡುಂಬಾ, ಟೋಪಿವಾಲಾ, ಜೂಮ್, ಚಮಕ್, ಪಟಾಕಿ ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದು, ಅವರ ಸಾವಿನಿಂದ ಸ್ಯಾಂಡಲ್ವುಡ್ ಗೆ ಬರ ಸಿಡಿಲು ಬಡಿದಂತೆಯಾಗಿದೆ.

ವರದಿ- ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version