ಸಚಿವ ಸುರೇಶ್ ಅಂಗಡಿ ನಿಧನದ ಹಿನ್ನಲೆ ಬಿಜೆಪಿ ಘಟಕದ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ..!

ಮಳವಳ್ಳಿ: ಕೇಂದ್ರ ರೈಲ್ವೆ ಖಾತೆ ಸಚಿವ ಸುರೇಶ್ ಅಂಗಡಿ ನಿಧನದ ಹಿನ್ನಲೆಯಲ್ಲಿ ಮಳವಳ್ಳಿ ಮಂಡಲ ಬಿಜೆಪಿ ತಾಲ್ಲೂಕು ಘಟಕದ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ ಮಳವಳ್ಳಿ ಪಟ್ಟಣದಲ್ಲಿ ನಡೆಸಲಾಯಿತು. ಪಟ್ಟಣದ ಸಾರಿಗೆ ಬಸ್ ನಿಲ್ದಾಣ ಮುಂಭಾಗ. ಬಿಜೆಪಿ ತಾಲ್ಲೂಕು ಅಧ್ಯಕ್ಷ ಎಂ.ಎನ್ ಕೃಷ್ಣರವರು ಅಧ್ಯಕ್ಷತೆ ಯಲ್ಲಿ ಬಿಜೆಪಿ ತಾಲ್ಲೂಕು ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸುರೇಶ್ ಅಂಗಡಿ ರವರ ಭಾವಚಿತ್ರಕ್ಕೆ ನಮನ ಸಲ್ಲಿಸಿ ಒಂದು ನಿಮಿಷ ಮೌನ ಅಚರಣೆ ನಡೆಸಲಾಯಿತು.ಇನ್ನೂ ತಾಲ್ಲೂಕು ಅಧ್ಯಕ್ಷ ಎಂ.ಎನ್ ಕೃಷ್ಣ ಮಾತನಾಡಿ, ಬಿಜೆಪಿ ಪಕ್ಷದಲ್ಲಿ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿ , ಸತತ 4 ಬಾರಿ ಲೋಕಸಭಾ ಸದಸ್ಯರಾಗಿ ಈ ಭಾರಿ ಕೇಂದ್ರದಲ್ಲಿ ರಾಜ್ಯ ರೈಲ್ವೆ ಖಾತೆ ಸಚಿವ ರಾಗಿದ್ದರು, ಅವರ ಅಗಲಿಕೆ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಜೊತೆಗೆ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದರು. ಹಿರಿಯ ಬಿಜೆಪಿ ಮುಖಂಡ ಅಪ್ಪಾಜೀಗೌಡ, ಶಿವಲಿಂಗಯ್ಯ, ಪುರಸಭೆ ಸದಸ್ಯ ರವಿ ,ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಕೆ.ಸಿ ನಾಗೇಗೌಡ, ಜಿಲ್ಲಾ ವಕ್ತಾರ ಚಿಕ್ಕಣ್ಣ, ಸೇರಿದಂತೆ ಮತ್ತಿತ್ತರರು ಇದ್ದರು.

ವರದಿ- ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Please follow and like us:

Related posts

Leave a Comment