ಸರ್ಕಾರದ ವಿರುದ್ಧ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ..!

ಕೋಲಾರ: ರೈತ ವಿರೋಧಿ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಹೊರಟಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಿಲುವು ಖಂಡಿಸಿ ರೈತ ಸಂಘಟನೆ ಕಾರ್ಯಕರ್ತರು ಕೋಲಾರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ಪ್ರೋ.ಎಂಡಿ ನಂಜುಂಡಸ್ವಾಮಿ ಬಣದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪ್ರತಿಕೃತಿ ಶವ ಮೆರವಣಿಗೆ ನಡೆಸಿ ಭೂತ ದಹನ ನಡೆಸಿದರು. ಭೂಸ್ವಾಧೀನ ಕಾಯ್ದೆ, ಕೆಪಿಟಿಸಿಎಲ್, ಎಪಿಎಂಸಿ ಕಾಯ್ದೆಗಳನ್ನು ಕೇಂದ್ರ ಸರ್ಕಾರದ ತಾಳಕ್ಕೆ ತಕ್ಕಂತೆ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಹೊರಟಿರುವ ರಾಜ್ಯ ಸರ್ಕಾರ ರೈತ ವಿರೋಧಿ ನೀತಿಗಳನ್ನು ಅನುಸರಿಸುವ ಮೂಲಕ ರೈತ ವಿರೋಧಿ ಧೋರಣೆ ತಾಳುತ್ತಿದೆ. ರೈತರ ವಿರೋಧಿ ಕಟ್ಟಿಕೊಂಡು ಯಾವುದೇ ಸರ್ಕಾರಗಳು ಸುಸ್ಥಿರ ಆಡಳಿತ ನಡೆಸಲು ಸಾಧ್ಯವಾಗಿಲ್ಲ. ಕೊಡಲೇ ರೈತ ವಿರೋಧಿ ಕಾನೂನುಗಳನ್ನು ಸರ್ಕಾರಗಳು ವಾಪಸ್ ಪಡೆಯಬೇಕೆಂದು ರೈತ ಸಂಘಟನೆ ಕಾರ್ಯಕರ್ತರು ಆಗ್ರಹಿಸಿದರು.

ವರದಿ- ಬೆಟ್ಟಪ್ಪ ಎಕ್ಸ್ ಪ್ರೆಸ್ ಟಿವಿ ಕೋಲಾರ

Please follow and like us:

Related posts

Leave a Comment