ವಿಂಡೂ ಸೀಟ್’ ಚಿತ್ರದ ಫಸ್ಟ್ ಲುಕ್ ರಿವೀಲ್..!

ಬೆಂಗಳೂರು : ಸ್ಯಾಂಡಲ್ವುಡ್ ಬಹು ನಿರೀಕ್ಷಿತ ಸಿನಿಮಾ ವಿಂಡೂ ಸೀಟ್ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದೆ. ಶೀತಲ್ ಶೆಟ್ಟಿ ನಿರ್ದೇಶನದ ಮೊದಲ ಸಿನಿಮಾ ಇದಾಗಿದ್ದು, ಡಿಫರೆಂಟ್ ಕಾನ್ಸೆಪ್ಟ್ನಲ್ಲಿ ತಯಾರಾಗುತ್ತಿದೆ. ಇನ್ನೂ ಈ ಚಿತ್ರ ರೊಮ್ಯಾಂಟಿಕ್ ಥ್ರಿಲ್ಲಿಂಗ್ ಕಾನ್ಸೆಪ್ಟ್ನಲ್ಲಿ ಮೂಡಿ ಬಂದಿದೆ ಎನ್ನಲಾಗಿದೆ. ಚಿತ್ರದ ಹೀರೋ ಆಗಿ ರಂಗಿತರಂಗ ಖ್ಯಾತಿಯ ನಿರೂಪ್ ಭಂಡಾರಿ ಇಲ್ಲಿ ಪಕ್ಕಾ ರೊಮ್ಯಾಂಟಿಕ್ ಲುಕ್ಕಿನಲ್ಲಿ ಕಾಣಿಸಿಕೊಂಡಿದ್ದು, ಚಿತ್ರದ ಫೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ಸಖ್ಖತ್ತ್ ವೈರಲ್ ಆಗಿದೆ. ಇನ್ನು ಈ ಸಿನಿಮಾಗೆ ಜಾಕ್ ಮಂಜು ನಿರ್ಮಾಣ ಮಾಡಿದ್ದಾರೆ. ಒಟ್ಟಾರೆ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದ್ದು,ಚಿತ್ರ ಸಾಕಷ್ಟು ಕ್ಯೂರಿಯಾಸಿಟಿ ಹುಟ್ಟಿಸಿದೆ. ವಿಂಡೋ ಸೀಟ್ ಸಿನಿಮಾ ಕೊನೆ ಹಂತದಲ್ಲಿದ್ದು, ಶೀಘ್ರದಲ್ಲೇ ರಿಲೀಸ್ ದಿನಾಂಕವನ್ನ ಚಿತ್ರತಂಡ ತಿಳಿಸಲಿದೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment