ತಿಪಟೂರು

ಕೊರೊನಾ ಬಗ್ಗೆ ಹೆಚ್ಚು ಗಮನ ಹರಿಸಿ : ಡಾ. ರಾಕೇಶ್‌ಕುಮಾರ್..!

Published

on

ತಿಪಟೂರು : ಕೊರೊನಾ ಸೋಂಕು ದಿನೇ ದಿನೆ ಹೆಚ್ಚುತ್ತಿದ್ದು ಇದರ ಬಗ್ಗೆ ಎಲ್ಲರೂ ಹೆಚ್ಚಿನ ಜಾಗ್ರತೆವಹಿಸಿ ಕಟ್ಟು ನಿಟ್ಟಿನ ಕ್ರಮ ಕೈಗೊಂಡು ಕೊರೊನಾ ನಿಯಂತ್ರಿಸಬೇಕೆAದು ಜಿಲ್ಲಾಧಿಕಾರಿ ಡಾ.ರಾಕೇಶ್‌ಕುಮಾರ್ ಅಧಿಕಾರಿಗಳಿಗೆ ತಿಳಿಸಿದರು. ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕಿನ ಎಲ್ಲಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ತಿಪಟೂರು ತಾಲ್ಲೂಕಿನಲ್ಲಿ ಕೊರೊನಾ ಪ್ರಕರಣಗಳು ಈಗಾಗಲೆ ಸಾವಿರವನ್ನು ದಾಟಿ ಮುಂದೆ ಹೋಗುತ್ತಿದೆ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ಹೆಚ್ಚಿನ ಮುತುವರ್ಜಿವಹಿಸಿ ಕೊರೊನಾದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಿ ಮತ್ತು ಮಾಸ್ಕ್ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿ ದಂಡವನ್ನು ವಿಧಿಸಿ ಎಂದು ತಿಳಿಸಿದರು.ಸಭೆ ಮುಗಿದ ನಂತರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಬೇಟಿ ನೀಡಿ ಪರಿಶೀಲಿಸಿದರು.ಪ್ರಗತಿ ಪರಿಶೀಲನ ಸಭೆಯಲ್ಲಿ ಉಪವಿಭಾಗಾಧಿಕಾರಿ ದಿಗ್ವಿಜಯ್ ಬೋಡ್ಕೆ, ತಾ.ಪಂ ಇ.ಓ ಸುದರ್ಶನ್, ಡಿ.ವೈ.ಎಸ್ಪಿ ಚಂದನ್ ಕುಮಾರ್, ತಹಸಿಲ್ದಾರ್ ಚಂದ್ರಶೇಖರ್, ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ವರದಿ- ಸಿದ್ದೇಶ್ವರ ಸಿಎನ್ ಎಕ್ಸ್ ಪ್ರೆಸ್ ಟಿವಿ ತಿಪಟೂರು.

Click to comment

Trending

Exit mobile version