ಕೋಲಾರ ರೈತರಿಂದ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ…!

ಕೋಲಾರ: ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ಸೆ ವಿರೋದಿಸಿ ರಾಷ್ಟ್ರೀಯ ಹೆದ್ದಾರಿ ಬಂದ್ಗೆ ರೈತ ಪರ ಸಂಘಟನೆಗಳು ಕರೆ ನೀಡಿದ ಹಿನ್ನಲೆ, ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ವಡ್ಡಹಳ್ಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ರೈತ ಸಂಘಟನೆ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಹೆದ್ದಾರಿ ಬಂದ್ ಮಾಡಿದ್ರೆ ಪೊಲೀಸರು ಬಂಧನದ ಎಚ್ಚರಿಕೆ ನೀಡಿದ ಹಿನ್ನೆಲೆ ಹೆದ್ದಾರಿ ರಸ್ತೆಯ ಸರ್ವೀಸ್ ರಸ್ತೆಯಲ್ಲಿ ಕುಳಿತು ರೈತಸಂಘದ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿದರು.ಎಪಿಎಂಸಿ ಕಾಯ್ದೆ, ಭೂ ಸುದಾರಣಾ ಕಾಯ್ದೆ ಹಿಂಪಡೆಯುವಂತೆ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೊಗಿದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಹೆದ್ದಾರಿ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸುವ ಎಚ್ಚರಿಕೆ ಹಿನ್ನೆಲೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಇನ್ನೂ ಪ್ರತಿಭಟನೆ ಸ್ಥಳಕ್ಕೆ ಮುಳಬಾಗಿಲು ತಹಶಿಲ್ದಾರ ರಾಜಶೇಖರ ಆಗಮಿಸಿ ಕಾರ್ಯಕರ್ತರಿಂದ ಮನವಿ ಸ್ವೀಕರಿಸಿ ಪ್ರತಿಭಟನೆ ಹಿಂಪಡೆಯವಂತೆ ರೈತನ ವಲಸಿದರು.

ವರದಿ- ಬೆಟ್ಟಪ್ಪ ಎಕ್ಸ್ ಪ್ರೆಸ್ ಟಿವಿ ಕೋಲಾರ

Please follow and like us:

Related posts

Leave a Comment