ನಟಿ ಕಂಗನಾ ವಿರುದ್ಧ ತುಮಕೂರು JMFC ಕೋರ್ಟ್ ನಲ್ಲಿ ದೂರು..!

ತುಮಕೂರು : ಕೇಂದ್ರ ಸರ್ಕಾರ ಹಾಗು ಎಪಿಎಂಸಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರ ವಿರುದ್ಧ ಕಂಗನಾ ರಾಣಾವತ್ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ದೂರು ದಾಖಲಿಸಲಾಗಿದೆ. ರೈತರನ್ನ ಭಯೋತ್ಪಾದಕರಿಗೆ ಹೋಲಿಸಿದ್ದಾರೆಂದು ನಟಿ ಕಂಗನಾ ವಿರುದ್ಧ ತುಮಕೂರು ಜೆಎಂಎಫ್ಸಿ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ. ಕಂಗನಾ ಹೇಳಿಕೆಯಿಂದ ಆಕ್ರೋಶಗೊಂಡ ಹೈಕೋರ್ಟ್ ವಕೀಲ ರಮೇಶ್ ನಾಯಕ್, ಐಪಿಸಿ ಸೆಕ್ಷನ್ 44,108,153,153A ಹಾಗು 504 ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರಿಗೆ ದೂರು ನೀಡಿದ್ದರು, ದಾಖಲಿಸಿಕೊಳ್ಳದ ಹಿನ್ನೆಲೆ ನೇರವಾಗಿ ತುಮಕೂರು ಜೆಎಂಎಫ್ಸಿ ನ್ಯಾಯಾಲಯದಲ್ಲಿ ದೂರು ನೀಡಿದ್ದಾರೆ. ಇದೀಗ ನ್ಯಾಯಾಲಯ ಅನುಮತಿ ನೀಡಿದ್ದಲ್ಲಿ ಕಂಗನಾ ರಣಾವತ್ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ ಇದೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment