ಲಿಂಗಸೂಗೂರು

ಐಪಿಎಲ್ ಬೆಟ್ಟಿಂಗ್ ನಲ್ಲಿ ಭಾಗಿಯಾದವರನ್ನು ಬಂಧಿಸಿದ ಲಿಂಗಸೂಗೂರು ಪೊಲೀಸರು..!

Published

on

ಲಿಂಗಸಗೂರು: ಲಿಂಗಸಗೂರು ತಾಲೂಕಿನಲ್ಲಿ ಐಪಿಎಲ್ ಬೆಟ್ಟಿಂಗ್ ಎಗ್ಗಿಲ್ಲದೆ ಸಾಗಿದೆ. ಈ ದಂಧೆಯಲ್ಲಿ ನಿರತರಾಗಿರುವವರ ಭೇಟೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಕಡೆಗಳಲ್ಲಿ ಐಪಿಎಲ್ ಬೆಟ್ಟಿಂಗ್ ಜೋರಾಗಿ ನಡೆದಿದೆ. ಕಳೆದ ಬಾರಿ ಲಕ್ಷಾಂತರ ರೂಪಾಯಿ ನಗದು ಬೆಟ್ಟಿಂಗ್ ನಡೆದಿತ್ತು. ಆದರೆ ಈ ಬಾರಿ ನಗದು ವ್ಯವಹಾರಕ್ಕೆ ಅವಕಾಶ ಇಲ್ಲದಿದ್ದರಿಂದ ಅಕ್ರಮ ದಂಧೆಕೋರರು ತಂತ್ರಜ್ಞಾನವನ್ನು ಬಳಸಿಕೊಂಡು ಬೆಟ್ಟಿಂಗ್ ನಲ್ಲಿ ನಿರತರಾಗಿದ್ದಾರೆ. ಬಂಧಿತ ಆರೋಪಿಗಳು ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ದೇವರಭೂಪುರ ಗ್ರಾಮದ ಚನ್ನಬಸವ, ರಮೇಶ್, ಅಂಬಣ್ಣ ಎಂದು ಗುರುತಿಸಲಾಗಿದೆ. ತಾಲೂಕಿನ ದೆವಭೂಪುರ ಗ್ರಾಮದಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ ಮೂರು ಜನ ಯುವಕರನ್ನು ಪಿಎಸ್ಐ ಪ್ರಕಾಶ್ ರೆಡ್ಡಿ ಡಂಬಳ್ ಹಾಗೂ ಸಿಬ್ಬಂದಿಗಳು ಐಪಿಎಲ್ ಬೆಟ್ಟಿಂಗ್ ದಂಧೆಕೋರರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 3400 ರೂಪಾಯಿಗಳು ನಗುದು ಹಾಗೂ ಒಂದು ನೋಕಿಯಾ ಮೊಬೈಲ್ ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇನ್ನು ಪೊಲೀಸರು ನಿರಂತರವಾಗಿ ಬೆಟ್ಟಿಂಗ್ ದಂಧೆಕೋರರ ಹೆಡೆಮುರಿಕಟ್ಟಲು ತಂಡಗಳನ್ನು ರಚಿಸಿ ಹುಡುಕಾಟ ನಡೆಸುತ್ತಿದ್ದಾರೆ. ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕಲು ಮುಂದಾಗಿರುವ ಪೊಲೀಸರಿಗೆ ಸಾರ್ವಜನಿಕರು ಸಹಕಾರ ನೀಡುವ ಅಗತ್ಯತೆ ಇದೆ. ಲಿಂಗಸಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಡೆಯುತ್ತಿರುವ ಬಗ್ಗೆ ಮಾಹಿತಿಗಳು ಇವೆ. ಸಾರ್ವಜನಿಕರು ಖಚಿತವಾದ ಮಾಹಿತಿ ನೀಡಿದರೆ ಅಕ್ರಮ ದಂಗೆಕೋರರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು.ಪೊಲೀಸ್ ಇಲಾಖೆಯಿಂದ ಪ್ರತಿ ಏರಿಯಾಗಳಲ್ಲಿ ತಂಡಗಳನ್ನು ರಚನೆ ಮಾಡಲಾಗಿದೆ. ಫೋನ್ ಪೇ, ಗೂಗಲ್ ಪೇ ಮೂಲಕ ನಡೆಯುವ ಅಕ್ರಮ ಚಟುವಟಿಕೆ ಬಗ್ಗೆ ಸುಳಿವು ಸಿಕ್ಕಲ್ಲಿ ತಕ್ಷಣ ಅಂಥವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಲಿಂಗಸೂಗೂರು ಪಿಎಸ್ಐ ಪ್ರಕಾಶ್ ರೆಡ್ಡಿ ಡಂಬಳ್ ಹೇಳಿದರು.

ವರದಿ:ವೀರೇಶ್ ಅರಮನಿ ಎಕ್ಸ್‌ಪ್ರೆಸ್ ಟಿವಿ ಲಿಂಗಸೂಗೂರು.

Click to comment

Trending

Exit mobile version