ಡ್ರಗ್ಸ್ ವಿಚಾರಣೆಗೆ ಸಂಭಂದಿಸಿದಂತೆ ಅನುಶ್ರೀ ವಿಚಾರಣೆ ಮುಕ್ತಾಯಗೊಂಡಿದೆ..

ಡ್ರಗ್ಸ್ ಜಾಲಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಪಣಂಬೂರಲ್ಲಿ ಆ್ಯಂಕರ್ ಅನುಶ್ರೀ ವಿಚಾರಣೆ ಮುಕ್ತಾಯಗೊಂಡಿದೆ. ಡಿಸಿಪಿ ವಿನಯ್ ಗಾಂವ್ಕರ್ ನೇತೃತ್ವದಲ್ಲಿ ಮೂರುವರೆ ಗಂಟೆಗಳ ಸತತ ವಿಚಾರಣೆ ಮುಕ್ತಾಯಗೊಂಡಿದೆ. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅನುಶ್ರೀ, ತರುಣ್ ರಾಜ್ ನನಗೆ 12 ವರ್ಷಗಳ ಹಿಂದಿನ ಪರಿಚಯ. ತರುಣ್ ರಾಜ್ ನನಗೆ 6 ತಿಂಗಳು ಡ್ಯಾನ್ಸ್ ಕೊರಿಯೋಗ್ರಾಫ್ ಮಾಡಿದ್ದಾರೆ. ಈ ವೇಳೆ ಮಾತ್ರ ತರುಣ್ ರಾಜ್ ಪರಿಚಯವಾಗಿದೆ. ಡ್ರಗ್ಸ್ ಬಗ್ಗೆ ತರಣ್ ಜೊತೆ ಯಾವುದೇ ಸಂಬಂಧ ಇಲ್ಲ. ಪೊಲೀಸರು ಇವತ್ತು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ಮುಂದೆ ವಿಚಾರಣೆಗೆ ಕರೆದರೆ ಮತ್ತೆ ಹಾಜರಾಗುತ್ತೇನೆ. ಇವತ್ತು ಮುಂದಿನ ವಿಚಾರಣೆ ಬಗ್ಗೆ ಪೋಲಿಸರು ಏನೂ ಹೇಳಿಲ್ಲ ಎಂದ ಅವ್ರು ಡ್ರಗ್ ಮಾಫಿಯಾ ರಾಜ್ಯಕ್ಕೆ ಅಂಟಿರುವ ಭೂತ. ಆ ಭೂತವನ್ನು ಹೋಗಲಾಡಿಸಲು ಪೋಲಿಸರು ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ನಾವು ಸಹಕಾರ ನೀಡಬೇಕು ಎಂದರು.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment