Uncategorized

ರೈತ ದ್ರೋಹಿ ನೀತಿಗಳು ವಾಪಸ್ ಆಗಲಿ: ವಾಸುದೇವರೆಡ್ಡಿ..!

Published

on

ಮುಳಬಾಗಿಲು: ನಗರದ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದ ವಿವಿಧ ಸಂಘಟನೆಗಳ ಮುಖಂಡರು ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರಗಳು ಜಾರಿ ಮಾಡುತ್ತಿರುವ ಜನವಿರೋಧಿ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಮತ್ತು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ, ವಿದ್ಯುತ್ ಖಾಸಗೀಕರಣವನ್ನು ವಿರೋಧಿಸಿ ಸೆಪ್ಟೆಂಬರ್ 28 ಸೋಮವಾರ ನಡೆಯಲಿರುವ ಕರ್ನಾಟಕ ಬಂದ್ ನ್ನು ಜಿಲ್ಲೆಯಲ್ಲೂ ಎಲ್ಲಾ ರೈತ, ದಲಿತ,ಕಾರ್ಮಿಕ ಪ್ರಗತಿಪರ ಸಂಘಟನೆಗಳ ಹಾಗೂ ವಿವಿಧ ಪಕ್ಷಗಳ ನೇತೃತ್ವದಲ್ಲಿ ಯಶಸ್ವಿಗೊಳಿಸಲು ತೀರ್ಮಾನಿಸಲಾಯಿತು. ಈ ಸಭೆಯನ್ನು ಉದ್ದೇಶಿಸಿ ಎಸ್ಎಫ್ಐ ರಾಜ್ಯ ಕಾರ್ಯದರ್ಶಿ ವಾಸುದೇವರೆಡ್ಡಿ. ಕೆ ಮಾತನಾಡಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ರೈತ ದ್ರೋಹಿ ನೀತಿಗಳನ್ನು ವಾಪಸ್ ಪಡೆದುಕೊಳ್ಳಬೇಕು ಇಲ್ಲದಿದ್ದರೆ ದೇಶಾದ್ಯಂತ ರೈತ ಕಾರ್ಮಿಕರು,ದಲಿತ ವಿದ್ಯಾರ್ಥಿ ಯುವಜನ ಮಹಿಳಾ ಸಂಘಟನೆಗಳ ಹೋರಾಟ ಮುಂದುವರಿಯಲಿದೆ ಇದರ ಪ್ರಾರಂಭವಾಗಿ ಸೆಪ್ಟೆಂಬರ್ 28 ರ ಸ್ವಯಂಪ್ರೇರಿತ ಕರ್ನಾಟಕ ಬಂದ್ ಗೆ ಮುಳಬಾಗಿಲು ತಾಲ್ಲೂಕಿನ ಸಮಸ್ತ ಜನರು ಸಹಕರಿಸಲು ಕೋರಿದರು. ಸಭೆಯಲ್ಲಿ ಡಿಎಸ್ಎಸ್ (ಸಂಯೋಜಕ) ಜಿಲ್ಲಾ ಸಂಯೋಜಕ ಮೆಕಾನಿಕ್ ಶ್ರೀನಿವಾಸ್, ರಾಜ್ಯ ರೈತ ಸಂಘ (ಕೋಡಿಹಳ್ಳಿ ಚಂದ್ರಶೇಖರ್ ಬಣ) ಜಿಲ್ಲಾ ಮುಖಂಡ ಕೊತ್ತಿಮೀರಿ ಮಂಜುನಾಥ್, ತಾಲ್ಲೂಕು ಅಧ್ಯಕ್ಷ ಪಿ.ಎಸ್. ಗಂಗಾಧರ್, ಸಿಪಿಐ(ಎಂ) ಜಿಲ್ಲಾ ಸಮಿತಿ ಸದಸ್ಯ ಪಿ.ಆರ್.ಶಂಕರ್,ಎಸ್ಎಫ್ಐ ರಾಜ್ಯ ಕಾರ್ಯದರ್ಶಿ ವಾಸುದೇವರೆಡ್ಡಿ, ಜಿಲ್ಲಾಧ್ಯಕ್ಷ ಶಿವಪ್ಪ,ತಾಲ್ಲೂಕು ಕಾರ್ಯದರ್ಶಿ ಆನಂದ್,ನಗರಸಭಾ ಸದಸ್ಯ ಜಬೀವುಲ್ಲಾ, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷರು ಸೌಭಾಗ್ಯಮ್ಮ,ತಾಲ್ಲೂಕು ಮುಖಂಡರು ಸರೋಜಮ್ಮ,ಡಿವೈಎಫ್ಐ ಕೇರಳ ಶ್ರೀನಿವಾಸ್, ಕಾಂಗ್ರೆಸ್ ಕಿಸಾನ್ ಕೇತ್ ತಾಲ್ಲೂಕು ಅಧ್ಯಕ್ಷರು ಸದಾಶಿವ ಮುಂತಾದವರು ಹಾಜರಿದ್ದರು.

ವರದಿ-ವಿ.ರಾಮಕೃಷ್ಣ ಎಕ್ಸ್ ಪ್ರೆಸ್ ಟಿವಿ ಮುಳಬಾಗಿಲು

Click to comment

Trending

Exit mobile version