ತಿಪಟೂರು

ಸ್ವಯಂ ಪ್ರೇರಿತವಾಗಿ ವ್ಯಾಪಾರ ವಹಿವಾಟು ಬಂದ್ ಮಾಡಿ ಕರ್ನಾಟಕ ಬಂದ್ ಗೆ ಸಂಪೂರ್ಣ ಬೆಂಬಲ..!

Published

on

ತಿಪಟೂರು: ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆ, ಕೃಷಿ ಮಸೂದೆ, ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ ಸೇರಿದಂತೆ ಇತರೆ ಕಾಯ್ದೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಹೊರಟಿರುವುದು ಹಿಂಪಡೆಯಬೇಕೆಂದು ಒತ್ತಾಯಿಸಿ ರೈತಪರ ದಲಿತಪರ, ಕಾರ್ಮಿಕಪರ, ಕನ್ನಡಪರ, ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಕರೆ ನೀಡಿದ್ದ ಬಂದ್ ಗೆ ತಿಪಟೂರು ನಗರದಲ್ಲಿ ಉತ್ತಮ ಪ್ರತಿಕ್ರಿಯೆ ಬೆಳಗ್ಗೆ ಬಂದ್ ಗೆ ಕರೆ ನೀಡಿದ ಸಂಘಟನೆಗಳು ನಗರದ ಸಿಂಗ್ರಿ ನಂಜಪ್ಪ ವೃತ್ತದಲ್ಲಿ ಎಲ್ಲ ಸಂಘಟನೆಗಳು ಒಟ್ಟಿಗೆ ಸೇರಿ ಅಲ್ಲಿಂದ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಮನವಿ ಪತ್ರ ಸಲ್ಲಿಸಿದರು.ಹೋಟೆಲ್ ಬೀದಿ ವ್ಯಾಪಾರಿಗಳು, ಆಟೋಗಳು ಟ್ಯಾಕ್ಸಿಗಳು ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಬಂದ್ ಮಾಡುವುದರ ಮೂಲಕ ಕರೆ ನೀಡಿದ ಬಂದ್ ಗೆ ಬೆಂಬಲ ಸೂಚಿಸಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಜಿ ನಾರಾಯಣ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಾಂತರಾಜು, ಬಜಗೂರು ಮಂಜುನಾಥ್, ಮತ್ತು ಜೆಡಿಎಸ್ ಮುಖಂಡರಾದ ಶಿವಸ್ವಾಮಿ ದಲಿತ ಮುಖಂಡರಾದ ಕುಂದೂರು ತಿಮ್ಮಯ್ಯ, ಕಲ್ಲೇಶ್ ರೈತ ಸಂಘದ ಅಧ್ಯಕ್ಷರಾದ ಬಸ್ತಿಹಳ್ಳಿ ರಾಜಣ್ಣ, ಹಸಿರು ಸೇನೆಯ ಅಧ್ಯಕ್ಷರಾದ ತಿಮ್ಲಾಪುರ ದೇವರಾಜು ,ಕರ್ನಾಟಕ ರಕ್ಷಣಾ ವೇದಿಕೆಯ ವಿಜಯ್ ಕುಮಾರ್, ಮತ್ತು ಅತಿಥಿ ಉಪನ್ಯಾಸಕ ಸಂಘದ ವೆಂಕಟೇಶ್, ಆಶಾ ಕಾರ್ಯಕರ್ತೆಯರು ಇನ್ನೂ ಮುಂತಾದ ಮುಖಂಡರು ಭಾಗವಹಿಸಿದ್ದರು.

ವರದಿ-ಸಿದ್ದೇಶ್ವರ ಸಿಎನ್ ಎಕ್ಸ್ ಪ್ರೆಸ್ ಟಿವಿ ತಿಪಟೂರು.

Click to comment

Trending

Exit mobile version