ಚಾಲಕನ ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಕಾರ್ ಪಲ್ಟಿ- ಗ್ರಾಮಲೆಕ್ಕಾಧಿಕಾರಿ ಸ್ಥಳದಲ್ಲೇ ಸಾವು..!

ಮುಳಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಕಾರ್ ಪಲ್ಟಿಯಾಗಿ ಗ್ರಾಮ ಲೆಕ್ಕಾಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಮನಕಲಕುವಂತಹ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಚಾಮರಂಡಳ್ಳಿ ಬಳಿ ನಡೆದಿದೆ. ಮುಳಬಾಗಿಲು ತಾಲೂಕಿನ ಚಲ್ಲಪಲ್ಲಿ ಗ್ರಾಮದ ಮಧುಸೂದನ್(42) ಮೃತ ದುರ್ದೈವಿಯಾಗಿದ್ದು, ಗ್ರಾಮ ಲೆಕ್ಕಾಧಿಕಾರಿಯಾಗಿದ್ದ ಮಧುಸೂದನ್ ಸ್ವಗ್ರಾ ಚಲ್ಲಪಲ್ಲಿಯಿಂದ ಮುಳಬಾಗಿಲು ಕಡೆಗೆ ವಾಪಸ್ ಬರ್ತಿದ್ದ ವೇಳೆ ಅವಘಡ ಸಂಭವಿಸಿದೆ. ಸ್ಥಳಕ್ಕೆ ಸ್ಥಳೀಯ ಪೋಲಿಸರು ಆಗಮಿಸಿದ್ದು ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.

ವರದಿ-ವಿ.ರಾಮಕೃಷ್ಣ ಎಕ್ಸ್ ಪ್ರೆಸ್ ಟಿವಿ ಮುಳಬಾಗಿಲು

Please follow and like us:

Related posts

Leave a Comment