ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಿಬಿಐ ನ್ಯಾಯಾಲಯದಿಂದ ಮಹತ್ವದ ತೀರ್ಪು..!

ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ನೊದ ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು ಬಿಜೆಪಿ ಭೀಷ್ಮ ಅಡ್ವಾಣಿ, ಮುರುಳಿ ಮನೋಹರ್ ಜೋಷಿ ಉಮಾಭಾರತಿ ಸೇರಿದಂತೆಎಲ್ಲಾ 32 ಆರೋಪಿಗಳನ್ನು ನಿರ್ದೋಷಿ ಎಂದು ತೀರ್ಪು ನೀಡಿದೆ. ಬಾಬ್ರಿ ಮಸೀದಿ ಧ್ವಂಸ ಪೂರ್ವ ನಿಯೋಜಿತ ಅಲ್ಲ, ಇದೊಂದು ಆಕಸ್ಮಿಕವಾಗಿ ನಡೆದ ಘಟನೆಯಾಗಿದೆ ಎಂದು ಸಿಬಿಐ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.ಸಿಬಿಐ ವಿಶೇಷ ನ್ಯಾಯಾಲಯ ಸುಮಾರು 28 ವರ್ಷಗಳ ಹಳೆಉ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಪ್ರಕಟಿಸುವ ಮೂಲಕ ಮಾಜಿ ಉಪಪ್ರಧಾನಿ ಬಿಜೆಪಿಯ ಭೀಷ್ಮ ಎಲ್.ಕೆ ಅಡ್ವಾಣಿ,ಬಿಜೆಪಿಯ ಹಿರಿಯ ಮುಖಂಡರಾದ ಮುರುಳಿ ಮನೋಹರ್ ಜೋಷಿ, ಉಮಾಭಾರತಿಯನ್ನು ಕೋರ್ಟ್ ಖುಲಾಸೆಗೊಳಿಸಿದೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment