Uncategorized

ಸಂಸದರು ಮತ್ತು ಶಾಸಕರ ಗಮನಕ್ಕೆ ತರದೇ ಕೋಟಿ ಕೋಟಿ ಹಣ ಗುಳುಂ ಮಾಡಿದ ಅಧಿಕಾರಿಗಳು..!

Published

on

ನಂಜನಗೂಡು: ಮಹಾಮಾರಿ ಕೋವಿಡ್ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಲಾಖಾಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆಟ ಬಯಲಾಗಿದೆ. ಸಂಸದರು ಮತ್ತು ಶಾಸಕರ ಗಮನಕ್ಕೆ ತರದೆ ನಂಜನಗೂಡು ಪಟ್ಟಣದ ರೈಲ್ವೆ ಮೇಲ್ಸೇತುವೆ ನಿರ್ಮಾಣದ ಹೆಸರಿನಲ್ಲಿ ಅಧಿಕಾರಿಗಳು ಕೋಟಿ ಕೋಟಿ ಹಣ ಗುಳುಂ ಮಾಡಿದ್ದಾರೆ. ಸರ್ಕಾರಿ ಜಾಗ ಬಿಟ್ಟು ಖಾಸಗಿ ಜಾಗ ಖರೀದಿ ಮಾಡಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಲಾಖೆ ಅಧಿಕಾರಿಗಳು ಈ ಭಾಗದ ಶಾಸಕರು ಮತ್ತು ಸಂಸದರ ಗಮನಕ್ಕೆ ತಾರದೆ ಖಾಸಗಿ ಜಾಗ ಖರೀದಿ ಮಾಡಿರುವ ಅಧಿಕಾರಿಗಳು ಈಗಾಗಲೇ ತಮಿಳುನಾಡು ಮೂಲದ ಉದ್ಯಮಿಗೆ 34 ಕೋಟಿ ರೂಗಳನ್ನು ಬಿಡುಗಡೆ ಮಾಡಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಿಚಾರ ತಿಳಿದು ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ನಂಜನಗೂಡಿನ ಶಾಸಕ ಹರ್ಷವರ್ಧನ್ ಚಳಿ ಬಿಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಲಾಖಾಧಿಕಾರಿಗಳಿಗೆ ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡಿದ್ದು, 63. 33 ಕೋಟಿ ರೂ ವೆಚ್ಚದಲ್ಲಿ ನಂಜನಗೂಡು ಪಟ್ಟಣದಿಂದ ಹಾದುಹೋಗುವ ಚಾಮರಾಜನಗರ ರೈಲ್ವೆ ಮಾರ್ಗದಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಗುದ್ದಲಿಪೂಜೆ ನಡೆದಿತ್ತು. ಕೇಂದ್ರ ಸರ್ಕಾರದ ಸೇತು ಭಾರತ್ ಯೋಜನೆಯ ಅಡಿಯಲ್ಲಿ ಬೃಹತ್ ಕಾಮಗಾರಿ ನಿರ್ಮಾಣವಾಗ ಬೇಕಾಗಿತ್ತು ರೈಲ್ವೆ ಮೇಲ್ಸೇತುವೆ ಕಾಮಗಾರಿ ಹೆಸರಿನಲ್ಲಿ ಸರ್ಕಾರಿ ಜಾಗ ಬಿಟ್ಟು ಖಾಸಗಿ ಜಾಗ ಖರೀದಿಸಿ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳು ಕೋಟಿಕೋಟಿ ಹಣವನ್ನು ಹೊರ ರಾಜ್ಯ ಉದ್ಯಮಿಗೆ ಬಿಡುಗಡೆ ಮಾಡಿದ್ದಾರೆ.ಸಂಸದರು ಮತ್ತು ಶಾಸಕರನ್ನು ಹೊರಗಿಟ್ಟು ರಾಷ್ಟ್ರೀಯ ಹೆದ್ದಾರಿ ಇಲಾಖಾಧಿಕಾರಿಗಳೇ ಎಲ್ಲಾ ತೀರ್ಮಾನ ಕೈಗೊಂಡಿರುವ ಕಾರಣ ಈಗ ಶಾಸಕರು ರೊಚ್ಚಿಗೆದ್ದಿದ್ದಾರೆ. ಮೈಸೂರು ಜಿಲ್ಲಾಧಿಕಾರಿಗಳನ್ನು ಖುದ್ದಾಗಿ ಭೇಟಿ ಮಾಡಿ ಅಧಿಕಾರಿಗಳ ವಿರುದ್ಧ ದೂರು ನೀಡಲು ಸಜ್ಜಾದ ಶಾಸಕ ಹರ್ಷವರ್ಧನ್ ಖಾಸಗಿ ಮಾಲೀಕನ ಒಂದೇ ಜಾಗಕ್ಕೆ ಎರಡು ಬಾರಿ ಕೋಟಿ-ಕೋಟಿ ಹಣ ಬಿಡುಗಡೆ ಮಾಡಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬಡಜನರ ಕೋಟಿ ಕೋಟಿ ತೆರಿಗೆ ಹಣವನ್ನು ಲೂಟಿ ಮಾಡಿರುವ ರಾಷ್ಟ್ರೀಯ ದಾರಿ ಇಲಾಖಾಧಿಕಾರಿಗಳ ವಿರುದ್ಧ ಸಂಸದರು ಮತ್ತು ಶಾಸಕರು ಯಾವ ಕ್ರಮ ಕೈಗೊಳ್ಳುತ್ತಾರೆ. ಬಡಜನರ ಹಣವನ್ನು ತಿಂದು ತೇಗಿದ ಅಧಿಕಾರಿಗಳಿಗೆ ತಕ್ಕಶಾಸ್ತಿ ಆಗುತ್ತಾ ಎಂಬುದನ್ನ ಕಾದು ನೋಡಬೇಕು.

ವರದಿ-ಮೋಹನ್ ಎಕ್ಸ್ ಪ್ರೆಸ್ ಟಿವಿ ನಂಜನಗೂಡು

Click to comment

Trending

Exit mobile version