ಧರ್ಮಸ್ಥಳ ಮಂಜುನಾಥ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ವಿನೂತನ ಕಾರ್ಯಕ್ರಮ..!

ಶಹಾಪುರ : ಶ್ರೀ ಧರ್ಮಸ್ಥಳ ಮಂಜುನಾಥ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ನಮ್ಮ ಊರು ನಮ್ಮ ಕೆರೆ ಎಂಬ ವಿನೂತನ ಕಾರ್ಯಕ್ರಮದ ಕುರಿತು ಚರ್ಚಿಸಲಾಯಿತು. ತಾಲ್ಲೂಕಿನ ವನದುರ್ಗ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಸಭೆ ಸೇರಿ ನಮ್ಮೂರು ನಮ್ಮ ಕೆರೆ ಕುರಿತು ಸಮಗ್ರವಾದ ಸಲಹೆ ಸೂಚನೆ ಪಡೆಯಲಾಯಿತು. ಗ್ರಾಮೀಣ ಭಾಗದಲ್ಲಿರುವ ಕೆರೆಗಳನ್ನು ಹೂಳೆತ್ತುವ ಕಾರ್ಯ ಶ್ರೀ ಧರ್ಮಸ್ಥಳ ಮಂಜುನಾಥ ಗ್ರಾಮೀಣಾಭಿವೃದ್ಧಿ ಸಂಸ್ಥೆ ಕೈಗೊಂಡಿದ್ದು ನಿಜಕ್ಕೂ ಸಂತೋಷದ ಸಂಗತಿ ಎಂದು ಪಿಡಿಒ ಬಿ.ಕೆ.ಬಿರಾದಾರ್ ಹೇಳಿದರು.ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಪ್ರಾದೇಶಿಕ ನಿರ್ದೇಶಕರಾದ ಶಿವರಾಯ ಪ್ರಭು ಜಿಲ್ಲಾ ನಿರ್ದೇಶಕರಾದ ಕಮಲಾಕ್ಷಿ ,ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಹನುಮಂತರಾಯ ದಳಪತಿ,ತಾಲ್ಲೂಕು ಯೋಜನಾ ಅಧಿಕಾರಿ ನಾಗಾರಾಜ, ಸಗರ ವಲಯದ ಮೇಲ್ವಿಚಾರಕರಾದ ಅನ್ನಪೂರ್ಣ,ಕೃಷಿ ಮೇಲ್ವಿಚಾರಕರಾದ ಸಂಗಪ್ಪ ಹಾಗೂ ಇತರರು ಉಪಸ್ಥಿತರಿದ್ದರು.

ವರದಿ-ಬಸವರಾಜ್ ಸಿನ್ನೂರ ಎಕ್ಸ್ ಪ್ರೆಸ್ ಟಿವಿ ಶಹಾಪುರ

Please follow and like us:

Related posts

Leave a Comment