ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ..!

ಮಳವಳ್ಳಿ: ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಸಮಾನ ಕೆಲಸಕ್ಕೆ ಸಮಾನ ವೇತನಕ್ಕೆ ಆಗ್ರಹಿಸಿ, ಕೆಲಸ ಖಾಯಂಗೊಳಿಸಲು ಒತ್ತಾಯಿಸಿ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಚಂದ್ರಮೌಳಿ ರವರಿಗೆ ಮನವಿ ಪತ್ರ ಸಲ್ಲಿಸಿದರು. ಇದೇ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಶುಶ್ರುಷಕಿ ಪ್ರಿಯಾಂಕಾ ಮಾತನಾಡಿ ಕಳೆದ 15 ವರ್ಷಗಳಿಂದ ರಾಷ್ಟ್ರಿಯ ಅರೋಗ್ಯ ಮಿಷನ್ ಅಡಿಯಲ್ಲಿ ಹೊರ ಗುತ್ತಿಗೆ ನೌಕರರಾಗಿ ಕಾರ್ಯ ನಿರ್ವಹಿಸುತ್ತಿದ್ದು ಸಮಾನ ಕೆಲಸಕ್ಕೆ ಸಮಾನವೇತನ ನೀಡಬೇಕೆಂದು ಆಗ್ರಹ ಪಡಿಸಿದರು. ನಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಸರ್ಕಾರಗಳು ಇದುವರೆವಿಗೆ ಯಾವುದೇ ನಿರ್ಧಾರ ತೆಗೆದುಕೊಳ್ಳದೆ ನಮ್ಮನ್ನು ಅತಂತ್ರ ಗೊಳಿಸಲಾಗಿದೆ ಎಂದು ಆರೋಪಿಸಿದ ಅವರು ಕೋವಿಡ್ 19 ಸಂದರ್ಭದಲ್ಲಿಯೂ ಸಹ ನಾವುಗಳು ನಮ್ಮ ಕರ್ತವ್ಯ ನಿರ್ವಹಿಸಿದ್ದೇವೆ, ಶಾಂತಿಯುತ ಪ್ರತಿಭಟನೆಯನ್ನು ಮಾಡಿ ಸರ್ಕಾರಕ್ಕೆ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಕೋವಿಡ್ 19 ರ ಸಂಧರ್ಭ ಎದುರಾಗಿದ್ದು, ನಾವುಗಳು, ಅರೋಗ್ಯ ಕಾರ್ಯದಲ್ಲಿ ಜನ ಸಾಮಾನ್ಯರ ಅರೋಗ್ಯ ಕಾಪಾಡುವಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದು, ನಮ್ಮ ಸೇವೆಯನ್ನು ಗಂಭೀರವಾಗಿ, ಪರಿಗಣಿಸಿ ನಮ್ಮ ಬೇಡಿಕೆ ಈಡೇರಿಸಬೇಕೆಂದು ಮುಖ್ಯಮಂತ್ರಿ ಮತ್ತು ಅರೋಗ್ಯ ಸಚಿವರಲ್ಲಿ ಮನವಿ ಮಾಡಿದರು. ಪ್ರತಿಭಟನೆಯಲ್ಲಿ, ಭರತ್, ಕುಮಾರ್ ಶುಶ್ರುಷಕಿಯರಾದ, ವಿದ್ಯಾರಾಣಿ, ಪ್ರಿಯಾಂಕಾ, ರಶ್ಮಿ ಆಶಾ, ಮಂಜುಳ ಪ್ರಯೋಗ ಶಾಲಾ ತಂತ್ರಜ್ಞೆ ಯರಾದ, ಸವಿತಾ, ನಂದಿನಿ, ಮಣಿ, ಶೃತಿ ಸೇರಿದಂತೆ ಹೊರ ಗುತ್ತಿಗೆ ನೌಕರರು ಭಾಗವಹಿಸಿದ್ದರು.

ವರದಿ-ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Please follow and like us:

Related posts

Leave a Comment