ಅತ್ಯಾಚಾರ ಖಂಡಿಸಿ ಪ್ರಗತಿಪರ ಸಂಘಟನೆ ಒಕ್ಕೂಟದಿಂದ ಪ್ರತಿಭಟನೆ..!

ಸಿಂಧನೂರು: ನಗರದ ತಹಸೀಲ್ದಾರ್ ಕಚೇರಿ ಆವರಣದ ಮುಂದೆ ಪ್ರಗತಿಪರ ಸಂಘಟನೆ ಒಕ್ಕೂಟದಿಂದ ಉತ್ತರಪ್ರದೇಶದ ಹಥರಸ್ ಗ್ರಾಮದ ದಲಿತ ಸಮುದಾಯಕ್ಕೆ ಸೇರಿದ 19 ವರ್ಷದ ಯುವತಿ ಮೇಲೆ ಅತ್ಯಾಚಾರ ನಡೆಸಿ ನಾಲಿಗೆ ಕತ್ತರಿಸಿ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಹಾಗೂ ಸಂತ್ರಸ್ತರ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಿ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಲು ಆಗ್ರಹಿಸಿ ಪ್ರತಿಭಟನೆ ಮಾಡಿದರು. ಉಪನ್ಯಾಸಕ್ಕೆ ವಿಜಯಲಕ್ಷ್ಮಿ ಗುರಿಕಾರ್ ಮಾತನಾಡಿ ದಿನನಿತ್ಯ ಮಹಿಳೆಯರ ಮೇಲೆ ಒಂದಲ್ಲ ಒಂದು ರೀತಿಯ ಶೋಷಣೆ ಅತ್ಯಾಚಾರಗಳು ನಡೆಯುತ್ತಾ ಇದ್ದರೂ ಸರ್ಕಾರ ಹಗಲು ಮಹಿಳೆಯರಿಗೆ ಯಾವುದೇ ಸೂಕ್ತ ರಕ್ಷಣೆಯನ್ನು ಒದಗಿಸಿಲ್ಲ .ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸರ್ಕಾರ ಕಣ್ಣು ಮುಚ್ಚಿ ಕಳೆದುಕೊಳ್ಳಿತಿದೆ ಕೂಡಲೇ ತಪ್ಪಿತಸ್ಥ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಯನ್ನು ಒದಗಿಸಿ ಮುಂದೆ ಈ ರೀತಿಯ ಘಟನೆ ಮರುಕಳಿಸದಂತೆ ಅಧಿಕಾರಿಗಳು ಸರ್ಕಾರ ಮಹಿಳೆಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಆಗ್ರಹಿಸಿದರು. ತಹಶಿಲ್ದಾರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡರಾದ ಶೇಕ್ಷಖಾದ್ರಿ, ಚಂದ್ರಶೇಖರ್, ಗೌರವ, ಗಂಗಮ್ಮ, ಶಕುಂತಲಾ, ಶರಣಮ್ಮ, ಎಸ್ ದೇವೇಂದ್ರಗೌಡ, ನಾಗರಾಜ್ ಪೂಜಾರಿ, ನರಸಿಂಹಪ್ಪ, ಸಮದ್ ಚೌದ್ರಿ, ಚಾಂದ್ ಪಾಷ ಜಾಗಿರದಾರ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

ವರದಿ-ಸೈಯದ್ ಬಂಧೇನವಾಜ್ ಎಕ್ಸ್ ಪ್ರೆಸ್ ಟಿವಿ ಸಿಂಧನೂರು

Please follow and like us:

Related posts

Leave a Comment