ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಖಂಡಿಸಿ ಕೆಲ ಸಂಘಟನೆಗಳಿಂಧ ಪ್ರತಿಭಟನೆ..!

ಮಳವಳ್ಳಿ: ಉತ್ತರಪ್ರದೇಶದಲ್ಲಿ ನಿರಂತರವಾಗಿ ನಡೆಯಿತ್ತಿರುವ ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಬರ್ಬರ ಹಿಂಸಾತ್ಮಕ ಘಟನೆಗಳು ಹಾಗೂ ಅಲ್ಲಿನ ಸರ್ಕಾರದ ತೀವ್ರ ನಿರ್ಲಕ್ಷ ಮತ್ತು ಆರೋಪಿಗಳಿಗೆ ರಕ್ಷಣೆ ನೀಡುವ ಧೋರಣೆಯನ್ನು ಖಂಡಿಸಿ ಜನವಾದಿ ಮಹಿಳಾ ಸಂಘಟನೆ,ಭಾರತ ಪ್ರಜಾಸತ್ತಾತ್ಮಕ ಯುವ ಜನ ಫೆಡರೇಷನ್, ಹಾಗೂ ಸಿಐಟಿಯು ತಾಲ್ಲೂಕು ಸಮಿತಿ ವತಿಯಿಂದ ಮಳವಳ್ಳಿ ಪಟ್ಟಣದ ಅನಂತರಾಂ ವೃತ್ತದಲ್ಲಿ ಪತ್ರಿಭಟನೆ ನಡೆಸಲಾಯಿತು.ಇನ್ನೂ ಜನವಾದಿ ಮಹಿಳಾ ಸಂಘಟನೆ ತಾಲ್ಲೂಕು ಅಧ್ಯಕ್ಷೆ ಸುಶೀಲ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಕೇಂದ್ರಸರ್ಕಾರ ಹಾಗೂ ಉತ್ತರ ಪ್ರದೇಶ ಸರ್ಕಾರದ ವಿರುದ್ದ ಘೋಷಣೆ ಕೂಗಿದರು.ಇದೇ ವೇಳೆ ಜನವಾದಿ ಮಹಿಳಾ ಸಂಘಟನೆ ರಾಜ್ಯಘಟಕದ ಅಧ್ಯಕ್ಷ ದೇವಿ ಮಾತನಾಡಿ, ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಿರಂತರವಾಗಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಗಳು ನಡೆಯುತ್ತಿದೆ ಅದರಲ್ಲೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿಅಧಿತ್ಯರವರ ಸರ್ಕಾರ ಗೂಂಡಾ ರಾಜ್ಯದಂತಾಗಿದ್ದು, ಅಲ್ಲಿ ನೆಲದ ಕಾನೂನುಗಳಿಗೆ ಬೆಲೆಯೇ ಇಲ್ಲದ ಜಂಗಲ್ ರಾಜ್ಯಯಾಗಿದೆ. ಅತ್ಯಾಚಾರದ ಸಂತ್ರಸ್ಥೆಯ ಕುಟುಂಬಕ್ಕೆಸೂಕ್ತ ರಕ್ಷಣೆ ನೀಡಬೇಕು ಶವ ಸಂಸ್ಕಾರಕ್ಕೂ ಅವಕಾಶ ನೀಡದೆ ಅಪರಾತ್ರಿಯಲ್ಲಿ ತಾವೇ ಚಿತೆಗೆಬೆಂಕಿ ಇಟ್ಟ ಪೊಲೀಸ್ ಮತ್ತು ಇತರ ಅಧಿಕಾರಿಗಳ ಮೇಲೆ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಇನ್ನೂ ಪ್ರತಿಭಟನೆಯಲ್ಲಿ ಜನವಾದಿ ಮಹಿಳಾ ಸಂಘಟನೆ ಜಿಲ್ಲಾಧ್ಯಕ್ಷೆ ಶೋಭ, ಮದ್ದೂರು ತಾಲ್ಲೂಕು ಅಧ್ಯಕ್ಷೆ ಲತಾ, ಸಿಐಟಿಯು ರಾಜ್ಯ ಕಾರ್ಯದರ್ಶಿ ಜಿ.ರಾಮಕೃಷ್ಣ ಸೇರಿದಂತೆ ಮತ್ತಿತ್ತರರು ಭಾಗಿಯಾಗಿದ್ದರು.

ವರದಿ-ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Please follow and like us:

Related posts

Leave a Comment