ಸಚಿವ ಶ್ರೀಮಂತ ಪಾಟೀಲ್ಗೆ ಕೊರೊನಾ ಸೋಂಕು ಧೃಡ..!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಇದೀಗ ರಾಜ್ಯದ ಮತ್ತೊಬ್ಬ ಸಚಿವರಿಗೆ ಕೊರೊನಾ ಸೋಂಕು ಇರುವುದು ಧೃಡವಾಗಿದೆ. ಕೈಮಗ್ಗ ಮತ್ತು ಜವಳಿ ಖಾತೆ ಸಚಿವ ಶ್ರೀಮಂತ್ ಪಾಟೀಲ್ಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ನಿನ್ನೆ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು,ವರದಿಯಲ್ಲಿ ಕೊರೊನಾ ಸೋಂಕು ಇರುವುದು ಧೃಡವಾಗಿದೆ. ಈ ಬಗ್ಗೆ ಸ್ವತಃ ಸಚಿವರು ಟ್ವೀಟ್ ಮಾಡುವ ಮುಖಾಂತರ ಸೋಂಕು ಇರುವುದು ಧೃಡಪಡಿಸಿದ್ದಾರೆ. ಈ ಹಿಂದೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ಸಚಿವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಎಲ್ಲರೂ ಗುಣಮುಖರಾಗಿದ್ದಾರೆ ನಾನು ಆದಷ್ಟೂ ಬೇಗ ಗುಣಮುಖನಾಗುತ್ತೇನೆ ಎಂದು ತಿಳಿಸಿದ್ದಾರೆ.

ವರದಿ- ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment