ಗಾಂಧಿಜಯಂತಿ ದಿನಾಚರಣೆ ದಿನದಂದು ಕಾಂಗ್ರೆಸ್ ಕಾರ್ಯಕರ್ತರಿಂದ ಅರೆಬೆತ್ತಲೆ ಪ್ರೋಟೆಸ್ಟ್..!

ಕೋಲಾರ: ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಮೇಲೆ ಹಲ್ಲೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಂದ ಕೋಲಾರ ಜಿಲ್ಲೆಯಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು. ಜಿಲ್ಲಾ ಕಾಂಗ್ರೆಸ್ ಆಧ್ಯಕ್ಷ ಕೆ.ಚಂದ್ರಾರೆಡ್ಡಿ ನೇತೃತ್ವದಲ್ಲಿ ಅರೆಬೆತ್ತಲೆಯಾಗಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಯುಪಿ ಪೋಲಿಸ್, ಸಿಎಂ ಯೋಗಿ ಆದಿತ್ಯನಾಥ್, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ನೇತೃತ್ವದ ಯುಪಿ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಲಾಯಿತು. ಉತ್ತರಪ್ರದೇಶದ ಹತ್ರಸನಲ್ಲಿ ನಡೆದ ಘಟನೆ ಖಂಡಿಸಿ ರಾಹುಲ್ ಗಾಂಧಿ ವಿರುದ್ಧ ಗೂಂಡಾ ವರ್ತನೆ ತೋರಿದ ಯುಪಿ ಪೋಲಿಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವರದಿ-ಬೆಟ್ಟಪ್ಪ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment