ಸರ್ಕಾರಿ ಶಾಲೆ ಪ್ರಾರಂಭದ ಹಿನ್ನೆಲೆ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣಾ ಕಾರ್ಯಕ್ರಮ..!

ಮಳವಳ್ಳಿ: ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಮುಚ್ಚಿದ ಸರ್ಕಾರಿ ಶಾಲೆ ಪ್ರಾರಂಭ ಉತ್ಸವ ಹಾಗೂ ಮಕ್ಕಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮ ಮಳವಳ್ಳಿ ತಾಲ್ಲೂಕು ಬುಳ್ಳಿಕೆಂಪನದೊಡ್ಡಿ ಗ್ರಾಮದಲ್ಲಿ ನಡೆಸಲಾಯಿತು.ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಚಿಕ್ಕಸ್ವಾಮಿ ರವರು ಚಾಲನೆ ನೀಡಿ ಮಾತನಾಡಿ, ಕಾನ್ವೆಂಟ್ ವ್ಯಾಮೋಹ ಬಿಡಿ ಸರ್ಕಾರಿ ಶಾಲೆ ಸಹ ಉತ್ತಮ ಶಿಕ್ಷಣ ನೀಡುತ್ತಿದೆ. ಎಲ್ಲರೂ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ಮನವಿಕೊಂಡರು.ಇದೇ ವೇಳೆ ಪಟ್ಟಣಗೆರೆ ರಂಗನಾಥ ಶಾಸ್ತ್ರಿ ಕೃಷ್ಣವೇಣಮ್ಮ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಕ್ಷೇತ್ರ ಸಮಾನ್ವಯಾಧಿಕಾರಿ ಯೋಗೇಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಯಪ್ರಕಾಶ,ಸಿದ್ದರಾಜು,ಪಟ್ಟಣಗೆರೆ ರಂಗನಾಥ ಶಾಸ್ತ್ರಿ ಕೃಷ್ಣವೇಣಮ್ಮ ಮೆಮೋರಿಯಲ್ ಟ್ರಸ್ಟ್ ಸತ್ಯನಾರಾಯಣ , ಕೃಷ್ಣ, ಆರ್ ದಾಸೇಗೌಡ ಹಾಲು ಉತ್ಪಾಧಕರ ಸಂಘದ ಬಿ. ನಾಗೇಶ್, ಪತ್ರಕರ್ತ ಚನ್ನೇಗೌಡ, ಸೇರಿದಂತೆ ಮತ್ತಿತ್ತರರು ಇದ್ದರು.

ವರದಿ-ಎ.ಎನ್ ಲೋಕೇಶ್.ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Please follow and like us:

Related posts

Leave a Comment