ಮಹಾತ್ಮ ಗಾಂಧಿಜೀ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಸರಳವಾಗಿ ಆಚರಣೆ..!

ನಂಜನಗೂಡು: ತಾಲೂಕು ಆಡಳಿತ ವತಿಯಿಂದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಸಕ ಹರ್ಷವರ್ಧನ್ ಅವರಿಂದ ಮಹಾತ್ಮಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.ಇದೇ ಸಂದರ್ಭ ತಾಲೂಕು ದಂಡಾಧಿಕಾರಿ ಹಾಗೂ ತಹಸೀಲ್ದಾರ್ ಮಹೇಶ್ ಕುಮಾರ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳಿಂದಲೂ ಮಹಾನ್ ನಾಯಕರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಲಾಯಿತು. ಶಾಸಕ ಹರ್ಷವರ್ಧನ್ ಹಾಗೂ ತಹಸೀಲ್ದಾರ್ ಮಹೇಶ್ ಕುಮಾರ್ ಮಾತನಾಡಿ ಇಬ್ಬರೂ ಮಹಾನ್ ನಾಯಕರುಗಳು ದೇಶಕ್ಕೆ ನೀಡಿದ ಕೊಡುಗೆಗಳು ಅಪಾರ ಇಂತಹ ನಾಯಕರುಗಳ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡು ಭವ್ಯ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಬೇಕು ಎಂದು ತಿಳಿಸುತ್ತಾ ಜನತೆಗೆ ಗಾಂಧಿ ಜಯಂತಿಯ ಶುಭಾಶಯ ತಿಳಿಸಿದರು. ಮಹಾತ್ಮ ಗಾಂಧೀಜಿಗೆ ಪ್ರಿಯವಾದ ಕಡಲೆಕಾಯಿಯನ್ನು ಕಾರ್ಯಕ್ರಮದಲ್ಲಿ ನೀಡಲಾಯಿತು. ಬಿಜೆಪಿ ಜಿಲ್ಲಾ ಅಧ್ಯಕ್ಷೆ ಮಂಗಳ ಸೋಮಶೇಖರ್ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕಂಠ ರಾಜ್ ಅರಸ್ ನಗರಸಭೆ ಆಯುಕ್ತ ಕರಿಬಸವಯ್ಯ ಸೇರಿದಂತೆ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ-ಮೋಹನ್ ಎಕ್ಸ್ ಪ್ರೆಸ್ ಟಿವಿ ನಂಜನಗೂಡು

Please follow and like us:

Related posts

Leave a Comment