ತಿಪಟೂರು

ಸರಳ ರೀತಿಯಲ್ಲಿ ಮಹಾತ್ಮಾ ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಣೆ..!

Published

on

ತಿಪಟೂರು: ನಗರದ ತಹಶಿಲ್ದಾರರ ಕಚೇರಿಯಲ್ಲಿ ತಾಲೂಕು ಆಡಳಿತದ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಯವರ 151 ನೇ ಜಯಂತಿಯನ್ನು ಆಚರಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ತಾಲೂಕು ತಹಸೀಲ್ದಾರ್ ಚಂದ್ರಶೇಖರ್ ಅವರು ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳಿಂದ ಮಹಾನ್ ನಾಯಕರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಲಾಯಿತು.ಗಾಂಧೀಜಿಯವರು ಕುರಿತು ಮಾತನಾಡಿದ ಅವರು ಸ್ವಾತಂತ್ರ್ಯ ದೊರಕಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟು ಶ್ರಮಿಸಿದರು. ಅಹಿಂಸೆಯ ಅಸ್ತ್ರ ಹಿಡಿದು ರಾಷ್ಟ್ರವನ್ನು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲು ಪ್ರೇರೇಪಿಸಿ ಯಶಸ್ವಿಯಾದ ಬಳಿಕವೂ ತಮ್ಮ ಸರಳ ಬದುಕನ್ನು ಮುಂದುವರೆಸಿದರು.ಅದೇ ರೀತಿ ಲಾಲ್ ಬಹಾದುರ್ ಶಾಸ್ತ್ರಿ ಅವರ ಸರಳ ಜೀವನವನ್ನು ನೆನೆದು ಹಿಂದಿನ ಯುವ ಜನತೆ ಅವರ ನಡೆದುಕೊಂಡು ಬಂದ ಹಾದಿಯಲ್ಲಿ ಸಾಗಲು ಮನವಿ ಮಾಡಿದರು.ಇದೇ ಸಂದರ್ಭದಲ್ಲಿ ನಗರದಲ್ಲಿ ಕರೋನಾ ವ್ಯಾಪಿಸಿದ್ದು ಸಾಮಾಜಿಕ ಅಂತರ ಮತ್ತು ಮಾಸ್ಕ್ಗಳನ್ನು ಕಡ್ಡಾಯವಾಗಿ ದರಿಸಿ ಜನತೆ ಬಹಳ ಜಾಗರೂಕತೆಯಿಂದ ಸಾಮಾಜಿಕ ಅಂತರವನ್ನು ಕಾಯ್ದುಕೊಂಡರೆ ಕರೋನಾದಿಂದ ಮುಕ್ತಿ ಹೊಂದಲು ಸಾಧ್ಯ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮಾನ್ಯ ತಹಸೀಲ್ದಾರ್ ಅವರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಾಲ್ಲೂಕು ಕಚೇರಿ ಸಿಬ್ಬಂದಿಗಳು ಭಾಗವಹಿಸಿದರು.

ವರದಿ-ಸಿದ್ದೇಶ್ವರ ಸಿಎನ್ ಎಕ್ಸ್ ಪ್ರೆಸ್ ಟಿವಿ ತಿಪಟೂರು.

Click to comment

Trending

Exit mobile version