Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಗಾಂಧೀ ಜಯಂತಿ ಆಚರಣೆ..!

Published

on

ಮಳವಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಸಹಯೋಗದೊಂದಿಗೆ 151ನೇ ಗಾಂಧಿ ಜಯಂತಿ ಅಂಗವಾಗಿ ನವ ಜೀವನೋತ್ಸವ ಕಾರ್ಯಕ್ರಮ ಮಳವಳ್ಳಿ ಪಟ್ಟಣದ ರೈತ ಸಮುದಾಯಭವನದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಮಳವಳ್ಳಿ ಪಟ್ಟಣದ ಇನ್ಸ್ ಪೆಕ್ಟರ್ ರಾಜೇಶ್ ಉದ್ಘಾಟಿಸಿ ಬಳಿಕ ಮಾತನಾಡಿ ಗಾಂಧಿಜೀ ತತ್ವವನ್ನು ಅನುಸರಿಸುತ್ತಿದ್ದೇವೆಯೇ ಎಂಬುದನ್ನು ಒಂದು ಬಾರಿ ಆತ್ಮವಿಮರ್ಶೆ ಮಾಡಿಕೊಳ್ಳಬೇಕಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು. ಬ್ರಿಟಿಷರ ಗುಲಾಮಗಿರಿಯಿಂದ ಹೋರಾಟ ಮಾಡುವ ಮೂಲಕ ನಮಗೆ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ. ಆದರೆ ಅದನ್ನು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ.ಪ್ರತಿಯೊಬ್ಬರು ಆತ್ಮವಿಮರ್ಶೆ ಮಾಡಿಕೊಂಡು ಬದುಕುಬೇಕು ಎಂದರು.ಇನ್ನೂ ಇದೇ ವೇಳೆ ಮದ್ಯಪಾನವನ್ನು ತ್ಯಜಿಸಿ ಹೊಸ ಜೀವನಕ್ಕೆ ಕಾಲುಇಡುತ್ತಿರುವ ದಂಪತಿಗಳಿಗೆ ಅಭಿನಂದಿಸಲಾಯಿತು.ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಟ್ರಸ್ಟ್ ಯೋಜನಾಧಿಕಾರಿ ಲೀಲಾವತಿ, ಜನಜಾಗೃತಿ ವೇದಿಕೆ ಮಾಗನೂರುಶಿವಕುಮಾರ, ಶ್ರೀಕಂಠಸ್ವಾಮಿ,ಪುರಸಭೆ ಮಾಜಿಸದಸ್ಯ ರಮೇಶ್,ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕ ಪ್ರಕಾಶ್, ಮಲ್ಲಿಕಾರ್ಜುನ, ಮೇಲ್ವಿಚಾರಕಿ ಶೋಭ, ಸೇರಿದಂತೆ ಮತ್ತಿತ್ತರರು ಇದ್ದರು.

ವರದಿ-ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Click to comment

Trending

Exit mobile version