ರಾಹುಲ್ ಗಾಂಧಿ ಹಾಗೂ ಮತ್ತು ಪ್ರಿಯಾಂಕಾ ಗಾಂಧಿ ಬಂಧನ ಖಂಡಿಸಿ ಪ್ರತಿಭಟನೆ- ಬಸನಗೌಡ ಬಾದರ್ಲಿ..!

ಸಿಂಧನೂರು : ರಾಹುಲ್ ಗಾಂಧಿ ಹಾಗೂ ಮತ್ತು ಪ್ರಿಯಾಂಕಾ ಗಾಂಧಿಯನ್ನು ಬಂಧಿಸಿರುವುದನ್ನು ಖಂಡಿಸಿ ಯುವ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಉತ್ತರ ಪ್ರದೇಶದ ದಲಿತ ಒಮ್ಮೆ ಯುವತಿಯ ಮೇಲೆ ಅತ್ಯಾಚಾರ ಎಸಗಿ ಕುಟುಂಬಕ್ಕೆ ಯುವತಿಯ ಶವವನ್ನು ಕೊಡದೇ ಪೊಲೀಸರು ಶವ ಸಂಸ್ಕಾರ ಮಾಡಿರುವುದನ್ನು ಖಂಡಿಸಿ ರಾಷ್ಟ್ರವ್ಯಾಪ್ತಿ ಹೋರಾಟಗಳು ನಡೆಯುತ್ತಿರುವ ಬೆನ್ನಲ್ಲೇ ಕುಟುಂಬಕ್ಕೆ ಸಾಂತ್ವನ ಹೇಳಲು ಉತ್ತರ ಪ್ರದೇಶಕ್ಕೆ ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಕುಟುಂಬಸ್ಥರ ಭೇಟಿಯಾಗಿದ್ದರು.ಅವರಿಗೆ ಅವಕಾಶ ಕೊಡದೇ ಹಲ್ಲೆ ಮಾಡಿ ಅವರನ್ನು ಬಂಧಿಸಿರುವುದು ಖಂಡನೀಯ ಎಂದು ರಾಜ್ಯ ಯೂತ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಬಸನಗೌಡ ಬಾದರ್ಲಿ ಪ್ರತಿಭಟನೆ ನಡೆಸುತ್ತಿದ್ದು, ನಗರದ ಗಾಂಧಿ ವೃತ್ತದಲ್ಲಿ ಏಕಾಏಕಿ ರಸ್ತೆ ರೋಕಾ ಮಾಡಲಾಯಿತು. ಯೋಗಿನಾಥ್ ರವರ ಸಿಎಂ ಸ್ಥಾನದಿಂದ ರಾಜಿನಾಮೆ ಕೊಡಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆಯನ್ನು ಸಹ ನೀಡಿದರು.ಪ್ರತಿಭಟನೆಯ ಸಮಯದಲ್ಲಿ ಯುವ ಕಾಂಗ್ರೆಸ್ ಪಕ್ಷ ರಾಜ್ಯ ಅಧ್ಯಕ್ಷ ಬಸನಗೌಡ ಬಾದರ್ಲಿ, ಕೆಪಿಸಿಸಿ ಕಾರ್ಯದರ್ಶಿ ಕೆ ಕರಿಯಪ್ಪ, ಅವರನ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆದುಕೊಂಡು ಹೋಗಿದ್ದರು.ಪ್ರತಿಭಟನೆ ತಣ್ಣಗಾದ ನಂತರ ಅವರನ್ನು ಬಿಡುಗಡೆ ಮಾಡಲಾಯಿತು.

ವರದಿ- ಸೈಯದ್ ಬಂಧೇನವಾಜ್ ಎಕ್ಸ್ ಪ್ರೆಸ್ ಟಿವಿ ಸಿಂಧನೂರು

Please follow and like us:

Related posts

Leave a Comment