ಜನ ವಿರೋಧಿ ಕಾಯ್ದೆ ಹಾಗೂ ವಿವಿಧ ಇಲಾಖೆ ಕಾಮಗಾರಿಗಳನ್ನು ತನಿಖೆ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ…!

ಸಿಂಧನೂರು: ನಗರದ ತಹಶಿಲ್ದಾರ ಕಚೇರಿ ಮುಂದೆ ನಗರ ಹಾಗೂ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ರೈತ ವಿರೋಧಿ ಭೂ ಸುಧಾರಣೆ ತಿದ್ದುಪಡಿ. ಎಪಿಎಂಸಿ ಕಾಯ್ದೆ ತಿದ್ದುಪಡಿಕ,ಕಾರ್ಮಿಕ ವಿರೋಧಿ ಕಾಯ್ದೆ ತಿದ್ದುಪಡಿ ಕಾಯ್ದೆಗಳನ್ನು ತಕ್ಷಣ ವಾಪಸ್ಸು ಪಡೆಯಲು, ಕೊರೋನ್ ನಿಯಂತ್ರಣ ಹೆಸರಿನಲ್ಲಿ ನಡೆದ ವ್ಯಾಪಕ ಭ್ರಷ್ಟಾಚಾರ ಉಚ್ಚ ನ್ಯಾಯಾಲಯ ಹಾಲಿ ನ್ಯಾಯಾಧೀಶರಿಂದ ತನಿಖೆ ಮಾಡಲು. ನಗರದ ಯು.ಜಿ.ಡಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮತ್ತು 24/7 ಕುಡಿಯುವ ನೀರಿನ ಕಾಮಗಾರಿ ಪೂರ್ಣಗೊಳಿಸಲು. 2018-2020 ರಲ್ಲಿ ಕ್ಷೇತ್ರದಲ್ಲಿ ನಡೆದ ವಿವಿಧ ಇಲಾಖೆ ಕಾಮಗಾರಿ ಗಳನ್ನು ತನಿಖೆ ಮಾಡುವುದು ಸೇರಿದಂತೆ ಮರಳು ಮಾಫಿಯಾ ದಂದೆಗೆ ಕಡಿವಾಣ ಹಾಕುವ ಒತ್ತಾಯಿಸಿ ಪ್ರತಿಭಟನೆ ಮಾಡಿದರು.ಮಾಜಿ ಶಾಸಕ ಹಂಪನಗೌಡ ಬಾದರ್ಲಿ. ಜಿಲ್ಲಾ ಪಂಚಾಯತ ಸದಸ್ಯ ಬಸವರಾಜ ಹಿರೇಗೌಡ, ನಗರ ಸಭೆ ಸದಸ್ಯ ಶೇಖರಪ್ಪ ಗಿಣಿವಾರ, ಸೇರಿದಂತೆ ವಿವಿಧ ಮುಖಂಡರು ಮಾತನಾಡಿದರು.ತಹಶಿಲ್ದಾರ ಮಂಜುನಾಥ ಭೋಗಾವತಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.ಈ ಸಂಧರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಖಾಜಿ ಮಲ್ಲಿಕ್,ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಪಂಪನಗೌಡ ಬಾದರ್ಲಿ, ಅನಿಲ್ ಕುಮಾರ್, ನಾಗರಾಜ ಗಸ್ತಿ,ನಿರುಪಾಧಿ ವಕೀಲರು,ಕರುಣಾ,ಮೂರ್ತುಜಾ,ಶಬಿರ್, ಶರಣಪ್ಪ ಉಪಲದೊಡ್ಡಿ, ಸೇರಿದಂತೆ ಅನೇಕರು ಭಾಗವಹಿಸಿದರು.

ವರದಿ- ಸೈಯದ್ ಬಂದೇ ನವಾಜ್ ಎಕ್ಸ್ ಪ್ರೆಸ್ ಟಿವಿ ಸಿಂಧನೂರು

Please follow and like us:

Related posts

Leave a Comment