ಸವದತ್ತಿ ಬಳಿ ಭೀಕರ ಅಪಘಾತ : 6 ಮಂದಿ ಸ್ಥಳದಲ್ಲೇ ಸಾವು..!

ಬೆಳಗಾವಿ : ಬೊಲೆರೋ ಹಾಗು ಟಾಟಾ ಏಸ್ ನಡುವೆ ಡಿಕ್ಕಿ ಸಂಭವಿಸಿ, ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿಯ ಸವದತ್ತಿ ಬಳಿ ಘಟನೆ ಸಂಭವಿಸಿದ್ದು, ಘಟನೆಯಲ್ಲಿ 6 ಮಂದಿ ಮೃತಪಟ್ಟಿದ್ರೆ 10 ಕ್ಕೂ ಹೆಚ್ಚು ಜನ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಮೃತಪಟ್ಟವರೆಲ್ಲರೂ ರಾಮದುರ್ಗ ತಾಲೂಕಿನ ಚಿಂಚನೂರು ಗ್ರಾಮದವರು ಎನ್ನಲಾಗಿದೆ. ಧಾರವಾಡದಲ್ಲಿ ಕೂಲಿ ಕೆಲಸ ಮುಗಿಸಿಕೊಂಡು ಬರುವ ವೇಳೆ ಘಟನೆ ಸಂಭವಿಸಿದೆ. ಇದರಲ್ಲಿ ಐವರು ಮಹಿಳೆಯರು ಹಾಗು ಓರ್ವ ಪುರುಷ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು,ಚಿಕಿತ್ಸೆ ನೀಡಲಾಗುತ್ತಿದೆ. ಸವದತ್ತಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment