27 ನೇ ವಸಂತಕ್ಕೆ ಕಾಲಿಟ್ಟ ಜೂನಿಯರ್ ಅಂಬಿ : ಬ್ಯಾಡ್ ಮ್ಯಾನರ್ಸ್ ಚಿತ್ರತಂಡದಿಂದ ಭರ್ಜರಿ ಗಿಫ್ಟ್..!

ಬೆಂಗಳೂರು : ದಿವಂಗತ ರೆಬೆಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ಇಂದು ೨೭ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಬ್ಯಾಡ್ ಮ್ಯಾನರ್ಸ್ ಸಿನಿಮಾ ತಂಡ ಭರ್ಜರಿ ಗಿಫ್ಟ್ ನೀಡಿದ್ದಾರೆ.ಜೆ.ಪಿ ನಗರದಲ್ಲಿರುವ ನಿವಾಸದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಅಭಿಮಾನಿಗಳು ಕೇಕ್ ತಯಾರಿಸಿದ್ದರು. ಅದರಂತೆ ಇಂದು ಬೆಳಗ್ಗೆ ಅಭಿಮಾನಿಗಳ ಜೊತೆ ಕೇಕ್ ಕತ್ತರಿಸುವ ಮೂಲಕ ಬರ್ತಡೇ ಸೆಲೆಬ್ರೇಟ್ ಮಾಡಿಕೊಂಡಿದ್ದಾರೆ.ಇನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಟ್ವೀಟ್ ಮೂಲಕ ಶುಭಾಶಯಗಳನ್ನ ಕೋರಿದ್ದಾರೆ.ಇನ್ನು ಮತ್ತೊಂದೆಡೆ ಅಭಿ ಹುಟ್ಟುಹಬ್ಬದ ಹಿನ್ನೆಲೆ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ತಂಡ ಟೀಸರ್ ರಿಲೀಸ್ ಮಾಡುವ ಮೂಲಕ ಬರ್ತಡೇ ಗಿಫ್ಟ್ ನೀಡಿದ್ದಾತೆ. ಸಿನಿಮಾಗೆ ದುನಿಯಾ ಸೂರಿ ಆಕ್ಷನ್ ಕಟ್ ಹೇಳಿದ್ದು, ಕೆ.ಎಂ ಸುಧೀರ್ ನಿರ್ಮಾಣ ಮಾಡಿದ್ದಾರೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment