ವೈದ್ಯ ಶಿಕ್ಷಣ ಗುತ್ತಿಗೆ ಮತ್ತು ಹೊರಗುತ್ತಿಗೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ..!

ಲಿಂಗಸೂಗೂರು: ರಾಜ್ಯ ಸರ್ಕಾರ ಆರೋಗ್ಯ ಕ್ಷೇತ್ರದ ಬಜೆಟ್ ಶೇಕಡಾವಾರು ಹೆಚ್ಚಿಸಬೇಕು ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಕ್ಷೇಮಾಭಿವೃದ್ಧಿಗೆ ಆದ್ಯತೆ ನೀಡಲು ಕ್ರಮವಹಿಸಬೇಕೆಂದು ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು. ಇನ್ನೂ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆಯನ್ನು ನೀಡಿ ಖಾಯಂಗೊಳಿಸಬೇಕು, ಎಲ್ಲಾ ಹುದ್ದೆಗಳಿಗೆ ವೇತನ ಭತ್ಯಗಳು ಮತ್ತು ವೇತನ ಶ್ರೇಣಿಯನ್ನು ನೀಡಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ಹರಿಯಾಣಾ ಮಾದರಿಯಲ್ಲಿ Comprehensive HR Policy ರಚಿಸಬೇಕು ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯು ಜಾರಿ ಮಾಡಿರುವ ಏಕರೂಪ ವೇತನದ ಮಾದರಿಯನ್ನು ಎಲ್ಲಾ ನೌಕರರಿಗೂ ಜಾರಿ ಮಾಡಲು ಕ್ರಮವಹಿಸಬೇಕು. NHM ಅಡಿಯಲ್ಲಿ ಕೆಲಸ ಮಾಡುವ ನೌಕರರಿಗಾಗಿ ಕೇಂದ್ರ ಸರ್ಕಾರ ನೀಡುತ್ತಿರುವ ‘ ಬೋನಸ್ ಹೆಚ್ಚಳವನ್ನು ( Experience Bonus of FY 2017-18 , 2018-19 & 2019-20 ) ಕಾರ್ಯಗತಗೊಳಿಸಬೇಕು ಜೊತೆಗೆ ನೌಕರರು edeert , zar ( Comprehensive Health Insurance Coverage & other Medical Benefits ) aldean ಯನ್ನು ಗುತ್ತಿಗೆ ಹಾಗೂ ಹೊರಗುತ್ತಿಗೆ ( ಎನ್.ಎಚ್.ಎಮ್ ಒಳಗೊಂಡಂತ ) ನೌಕರರಿಗೂ ವಿಸ್ತರಿಸಬೇಕು ಸಂಘದ ಅಧಿಕೃತ ಮುಷ್ಕರದ ದಿನಗಳಲ್ಲಿ ಕಡಿತವಾದ ವೇತನವನ್ನು ಪಾವತಿಸಲು ಕ್ರಮಕೈಗೊಳ್ಳಬೇಕೆಂದು ಹತ್ತು ಹಲವು ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕೆಂದು ಲಿಂಗಸಗೂರು ಸಹಾಯಕ ಆಯುಕ್ತರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನು ನೀಡಲಾಯಿತು.

ವರದಿ-ವೀರೇಶ್ ಅರಮನಿ ಎಕ್ಸ್ ಪ್ರೆಸ್ ಟಿವಿ ಲಿಂಗಸೂಗೂರು

Please follow and like us:

Related posts

Leave a Comment