ಲಿಂಗೈಕ್ಯರಾದ ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ..!

ತಿಪಟೂರು: ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹೆಸರಾಂತ ಮಠಗಳಲ್ಲಿ ಒಂದಾದ ಗೋಡೇಕೆರೆ ಸಂಸ್ಥಾನದ ಸ್ಥಿರ ಪಟ್ಟಾಧ್ಯಕ್ಷರಾದ ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾ ಸ್ವಾಮೀಜಿಯವರು ತೀವ್ರ ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದಾರೆ.ಸ್ವಾಮೀಜಿಯವರು ತಿಪಟೂರು ತಾಲ್ಲೂಕಿನ ಕೆ.ಬಿ ಕ್ರಾಸ್ ಶಾಖಾ ಮಠದಲ್ಲಿ ರಂಭಾಪುರಿ ವಿದ್ಯಾಸಂಸ್ಥೆಯ ಆಡಳಿತ ನಿರ್ವಹಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.ಕೆಲದಿನಗಳಿಂದ ಆರೋಗ್ಯದಲ್ಲಿ ಏರುಪೇರಿದ್ದು ಸೂಕ್ತ ಚಿಕಿತ್ಸೆ ಪಡೆದು ಕೊಂಚ ಮಟ್ಟಿಗೆ ಸುಧಾರಿಸಿಕೊಂಡಿದ್ದರು. ಆದ್ರೆ ನಿನ್ನೆ ಬೆಳಗ್ಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು ಸಾವನ್ನಪ್ಪಿದ್ದಾರೆ.ಇನ್ನೂ ಇವರ ಸಾವಿಗೆ ಅನೇಕ ಗಣ್ಯರು ಹಾಗೂ ಭಕ್ತಾಧಿಗಳೂ ತೀವ್ರ ಸಂತಾಪ ಸೂಚಿಸಿದ್ದಾರೆ.

ವರದಿ-ಸಿದ್ದೇಶ್ ಸಿ.ಎನ್ ಎಕ್ಸ್ ಪ್ರೆಸ್ ಟಿವಿ ತಿಪಟೂರು

Please follow and like us:

Related posts

Leave a Comment